ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಇನ್ನಿಲ್ಲ

ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಸಂಚಲನ ಮೂಡಿಸಿದ್ದ ಜನವಾರ್ತೆ ಕನ್ನಡ ದಿನಪತ್ರಿಕೆಯ ಸಂಪಾದಕರಾದ  ಜಿ.ಎಸ್. ನಾಗರಾಜ್ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ..

ಮುಂಗೋಪಿ, ಅಷ್ಟೇ ಮೃದು ಸ್ವಭಾವದ ನಾಗರಾಜ್ 1996 ರಲ್ಲಿ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಬದಲಾವಣೆ ತಂದು ಸಂಚಲನ ಮೂಡಿಸಿದ್ದ ಧೀಮಂತ ಪತ್ರಿಕಾ ಸಂಪಾದಕ ಹಾಗೂ ಸಂಸ್ಥಾಪಕರಾಗಿದ್ದರು. ಬಹುತೇಕ ಪತ್ರಕರ್ತರು ಇವರ ಗರಡಿಯಲ್ಲಿ ಬೆಳೆದುಬಂದಿದ್ದಾರೆ.




1996 ರಿಂದ 2016ರ ವರೆಗೆ ನಿರಂತರವಾಗಿ ಜನವಾರ್ತೆಯನ್ನ‌ ನಡೆಸಿದರೂ‌ ಮಧ್ಯದಲ್ಲಿ ಎರಡು ಮೂರು ವರ್ಷ ಪತ್ರಿಕೆ ಸ್ಥಗಿತವಾಗಿತ್ತು. ನಂತರ 2018 ರ ಆಜೂ ಬಾಜುವಿನಲ್ಲಿ ಪತ್ರಿಕೆ ಮತ್ತೆ ಆರಂಭಿಸಿದ್ದರು. ಆದರೆ ಅದೂ ಸಹ ಸುದೀರ್ಘವಾಗಿ ನಡೆಸಲು ಸಾಧ್ಯವಾಗಲಿಲ್ಲ.

ಅವರ ಅಂತ್ಯ ಕ್ರಿಯೆ ಸಂಜೆ 6 ರ ನಂತರ ನಡೆಯಲಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ  ಶಿವಮೊಗ್ಗದಲ್ಲಿರುವ ರವೀಂದ್ರ ನಗರದ ಮನೆಗೆ ಅವರ ಪಾರ್ಥೀವ ಶರೀರವನ್ನ ಕರೆತರಲಾಗಿದೆ.

ಸಂಜೆಯ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! - ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 hour ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

9 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

22 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago