ಜಮೀನು ಮಂಜೂರು ವಿಚಾರದಲ್ಲಿ ಯಾರಿಗೂ ನಯಾ ಪೈಸೆ ಹಣ ಕೊಡಬೇಡಿ – ಗೃಹ ಸಚಿವ ಆರಗ ಜ್ಞಾನೇಂದ್ರ|94c

94ಸಿ ಹಾಗೂ ಬಗರ್‌ಹುಕುಂ ಹಕ್ಕು ಪತ್ರ ವಿತರಣೆ ; ಜಮೀನು ಮಂಜೂರು ವಿಚಾರದಲ್ಲಿ ನಯಾ ಪೈಸೆ ಹಣ ಕೊಡಬೇಡಿ ; ಸಚಿವ ಆರಗ ಜ್ಞಾನೇಂದ್ರ

ಹೊಸನಗರ: ಜಮೀನು ಮಂಜೂರಾತಿ ವಿಚಾರದಲ್ಲಿ ಅಧಿಕಾರಿಗಳು ಹಣ ಕೇಳುವ ಕುರಿತಾಗಿ ಸಾಕಷ್ಟು ದೂರು ಬಂದಿದ್ದು ರೈತರು ನಯಾ ಪೈಸೆ ಕೊಡಬೇಡಿ. ಅರ್ಹ ಫಲಾನುಭವಿ ರೈತರಿಗೆ ಹಕ್ಕುಪತ್ರ ಸಿಕ್ಕೆ ಸಿಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.




ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 94 ಸಿ ಹಾಗೂ ರೈತರಿಗೆ ಬಹರ್‌ಹುಕುಂ ಸಾಗುವಳಿ ಹಕ್ಕು ಪತ್ರ ಹಾಗೂ ವಾಸದ ಮನೆ 94ಸಿ ಹಕ್ಕುಪತ್ರ ವಿತರಿಸಿ ನಂತರ ಮಾತನಾಡಿ, ರೈತರು ತಮ್ಮ ಜಮೀನಿನ ಹಕ್ಕುಪತ್ರ ಪಡೆಯುವುದು ಅವರ ಹಕ್ಕು ಆಗಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ರೈತರ ಜಮೀನುಗಳಿಗೆ ಹಕ್ಕು ಪತ್ರ ನೀಡುವುದು ಒಂದು ಪುಣ್ಯದ ದೇವರ ಕೆಲಸವಾಗಿದೆ. ಆದರೆ ಇಲ್ಲಿ ಹಕ್ಕುಪತ್ರದಲ್ಲಿ ಹಣ ಮಾಡುವ ತಂತ್ರಗಾರಿಕೆ ನಡೆಯುತ್ತಿದ್ದು ಇದು ಶಿಕ್ಷಾರ್ಹ ಅಪರಾಧವಾಗಿದೆ. ಇಲ್ಲಿ ಅಧಿಕಾರಿಗಳ ಮತ್ತು ಮಧ್ಯವರ್ತಿಗಳ ಕೈಗೆ ಹಣ ನೀಡುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿದೆ. ಇದು ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ ನಾನು ಇಂತಹ ವಿಚಾರದಲ್ಲಿ ಸುಮ್ಮನೆ ಕೂರುವುದಿಲ್ಲ. ಉಗ್ರ ಕ್ರಮ ಕೈಗೊಳ್ಳುತ್ತೇನೆ. ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ರೈತರಿಂದ ಹಣ ಪಡೆದುಕೊಂಡಿದ್ದರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.




ಅಕ್ರಮಕ್ಕೆ ಅವಕಾಶವಿಲ್ಲ: ಈ ಹಿಂದೆ 1918ರಲ್ಲಿ ನಮ್ಮ ಸರ್ಕಾರ ಬರುವ ಮುಂಚೆ ಸಾಗುವಳಿ ಮಾಡದ ಮತ್ತು ಅಕೇಶಿಯಾ ನೆಡುತೋಪು ಪ್ರದೇಶದಲ್ಲೂ ಬಗರ್‌ಹುಕುಂ ಹಕ್ಕಪತ್ರ ನೀಡಿದ ಉದಾಹರಣೆ ಇದೆ. ರೈತರಿಂದ ಲಕ್ಷ ಲಕ್ಷ ಹಣ ಪಡೆದು ಮನಬಂದಂತೆ ಹಕ್ಕುಪತ್ರ ಮಂಜೂರು ಮಾಡಲಾಗಿದೆ. ಲಕ್ಷಾಂತರ ರೂಗಳಿಗೆ ಹಕ್ಕುಪತ್ರ ಬಿಕರಿ ಆಗಿವೆ. ನಕಲಿ ಹಕ್ಕುಪತ್ರದ ಜಾಲವೇ ಹೊಸನಗರದಲ್ಲಿ ಇತ್ತು ಆದರೆ ನಮ್ಮ ಸರ್ಕಾರ ಬಂದ ಮೇಲೆ ಇದೆಕ್ಕೆಲ್ಲ ಕಡಿವಾಣ ಹಾಕಲಾಗಿದೆ. ಆದರೂ ಹಣಕ್ಕಾಗಿ ಪೀಡಿಸುವ ಪರಿಪಾಠ ನಡೆಯುತ್ತಲೆ ಇದೆ. ಇಂತಹ ಅಕ್ರಮವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಮತ್ತು ಸಿಬ್ಬಂದಿಗಳು ರೈತರ ಪರವಾಗಿ ಕೆಲಸನಮಾಡುತ್ತಿದ್ದಾರೆ ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಬೇಕು ಅರ್ಹ ರೈತರಿಗೆ ಹಕ್ಕುಪತ್ರ ಸಿಗಬೇಕು. ಇಲ್ಲಿ ರಾಜಕೀಯವಿಲ್ಲ ಎಲ್ಲಾ ರೈತರಿಗೂ ಸಮಾನ ನ್ಯಾಯ ಎಂದರು.

ಬಜೆಟ್‌ ಜನತೆಗೆ ಖುಷಿ ಕೊಟ್ಟಿದೆ: ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ 3.09 ಲಕ್ಷಕೋಟಿ ಬಜೆಟ್‌ನ್ನುರಾಜ್ಯದಜನರು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಬಜೆಟ್‌ ರೈತರಿಗೆ ಖುಷಿ ಕೊಟ್ಟಿದೆ. ರಾಜ್ಯದ ಎಲ್ಲಾ ಜನರ ಹಿತಕಾಯಲಾಗಿದೆ. ಇದೊಂದು ಸರ್ವವ್ಯಾಪಿ. ಸರ್ವಸುಖಿ ಬಜೆಟ್‌ ಆಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಅಡಿಕೆಗೆ ಉತ್ತಮ ಬೆಲೆ: ಈ ಹಿಂದಿನ ಒಪ್ಪಂದದ ಪ್ರಕಾರ ವಿದೇಶಿ ಅಡಿಕೆ ದೇಶಕ್ಕೆ ಬರುತ್ತಿದೆ. ಅಲ್ಲಿನ ಕಳಪೆ ಅಡಿಕೆ ಇಲ್ಲಿನ ಮಾರುಕಟ್ಟೆಯಲ್ಲಿ ಹೋಗುವುದಿಲ್ಲ. ವಿದೇಶಿ ಅಡಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ನಮ್ಮ ಅಡಿಕೆಗೆ ಉತ್ತಮ ಮಾರುಕಟ್ಟೆ ಲಭ್ಯವಾಗಲಿದೆ ಎಂದ ಸಚಿವರು ಬಜೆಟ್‌ನಲ್ಲೂ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಹಣ ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ ಎಂದರು.




ಸಭೆಯಲ್ಲಿ ತಹಶೀಲ್ದಾರ್ ರಾಜೀವ್, ಶಿರಾಸ್ಥೆದಾರ್ ಸುಧೀಂದ್ರಕುಮಾರ್, ಚುನಾವಣೆ ಅಧಿಕಾರಿ ವಿನಯ್ ಎಂ ಆರಾಧ್ಯ, ಚಿರಾಗ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಕೌಶಿಕ್, ಹಾಗೂ ತಾಲ್ಲೂಕು ಕಛೇರಿಯ ಸಿಬ್ಬಂದಿಗಉ ಬಗರ್‌ಹುಕುಂ ಸಮಿತಿ ಅಧ್ಯಕ್ಷ ಬಂಕ್ರೀಬೀಡು ಮಂಜುನಾಥ್, ಸದಸ್ಯರಾದ ನಾಗೇಂದ್ರಪ್ಪಗೌಡ, ವೀಣಾ, ಭಾಗ್ಯಮ್ಮ ಇನ್ನೂ ಮುಂತಾದವರು ಇದ್ದರು.

112 ನೇ ಸರ್ವೆ ನಂಬರ್ ನಲ್ಲಿ ಕಲ್ಲುಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಮುಂದಾದ ಸಚಿವರು : ಹೊಸನಗರದಿಂದ ಕೇವಲ 1ಕಿ.ಮೀ ದೂರದಲ್ಲಿ ಸುಮಾರು 300 ಮನೆಗಳಿದ್ದು ಸರ್ಕಾರಿ ಕಛೇರಿಗಳಿವೆ ಮಾರಿಗುಡ್ಡದಲ್ಲಿ ವಾಸಿಸುವ ಜನರಿಗೆ ತೊಂದರೆಯಾಗುತ್ತಿದೆ ಎಂದು ಅಲ್ಲಿನ ಸಾರ್ವಜನಿಕರು ಕೃಷಿಕ ರತ್ನಾಕರ್‌ರವರ ನೇತೃತ್ವದಲ್ಲಿ ಸುಮಾರು 300 ಜನರು ಮನವಿ ಅರ್ಪಿಸಿ ತಕ್ಷಣ ಈ ಕಲ್ಲು ಕ್ವಾರೆಯನ್ನು ನಿಲ್ಲಿಸಲು ಮನವಿ ಮಾಡಿದ ಮೇರೆಗೆ ತಕ್ಷಣ ಗಣಿ ಭೂ ವಿಜ್ಞಾನ ಇಲಾಖೆಯ ಗಮನಕ್ಕೆ ತರುವುದರ ಜೊತೆಗೆ ತಹಶೀಲ್ದಾರ್ ರಾಜೀವ್ ಹಾಗೂ ಸಿಬ್ಬಂದಿಗೆ ತಕ್ಷಣ ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೌಖಿಕವಾಗಿ ಸೂಚಿಸಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

5 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago