ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder


ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ.



ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ.


ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ ಮತ್ತು ಪ್ರೇಮ ಎಂಬವರು ತನ್ನ ಗಂಡನ ಮೇಲೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಮೃತನ ಪತ್ನಿ ನಾಗರತ್ನ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.



ಗಾಯಾಳು ವೆಂಕಟೇಶ್(36) ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ. 

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Leave a Reply

Your email address will not be published. Required fields are marked *