ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್ ಎಂಬವರ ಕೊಲೆಯಾಗಿದೆ.
ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ ಮತ್ತು ಪ್ರೇಮ ಎಂಬವರು ತನ್ನ ಗಂಡನ ಮೇಲೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಮೃತನ ಪತ್ನಿ ನಾಗರತ್ನ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಗಾಯಾಳು ವೆಂಕಟೇಶ್(36) ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ.
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…