ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್ರವರು, ಇಲ್ಲಿನ ಕಾಂಗ್ರೆಸ್ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್ಎಂ ಮಂಜುನಾಥ್ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.
ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್ ಸೀನ್ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ.
ಹೌದು, ಇವತ್ತು ತೀರ್ಥಹಳ್ಳಿಯ ನಾಲೂರು ಸಮೀಪ ಬರುವ ಗಾಡರಗದ್ದೆಯ ಹುರುಳಿ ಎಂಬ ಗ್ರಾಮದ ನರಸಿಂಹ ಸ್ವಾಮಿ ದೇವಸ್ಥಾನದ ಜಾತ್ರೆ ನಡೆಯುತ್ತಿತ್ತು. ಸುಮಾರು 2-3 ಸಾವಿರ ಜನರು ಜಾತ್ರೆಯಲ್ಲಿ ಸೇರಿದ್ದರು. ಈ ಜಾತ್ರೆ 10 ನಿಮಿಷದ ಅಂತರದಲ್ಲಿ ಆರ್ಎಂ ಮಂಜುನಾಥ್ ಗೌಡರು ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ರವರು ಭೇಟಿಕೊಟ್ಟಿದ್ದರು. ಬೇರೆ ಬೇರೆಯಾಗಿ ಬಂದಿದ್ದ ಮುಖಂಡರು ಪರಸ್ಪರ ಮುಖಾಮುಖಿಯಾಗುವ ಸಂದರ್ಭ ಸಹಜವಾಗಿಯೇ ಎದುರಾಗಿತ್ತು.
ಈ ವೇಳೇ ದೇವರ ದರ್ಶನ ಪಡೆದ ಬಳಿಕ, ಕಾರ್ಯಕರ್ತರು ಹಾಗೂ ಸ್ಥಳೀಯರು ಇಬ್ಬರು ನಾಯಕರ ಮುನಿಸು ನಿವಾರಿಸಿದ್ದರಷ್ಟೆ ಅಲ್ಲದೆ ಯಾರಿಗೆ ಟಿಕೆಟ್ ಸಿಕ್ಕರೂ ನಾವು ಕೆಲಸ ಮಾಡುತ್ತೇವೆ, ಭಿನ್ನಮತ ಬೇಡ, ಒಗ್ಗಟ್ಟಿನಿಂದ ಸಾಗೋಣ ಎಂದು ನಾಯಕರಲ್ಲಿ ವಿನಂತಿ ಮಾಡಿದ್ರು. ಅಲ್ಲದೆ ನಾಯಕರಿಬ್ಬರ ಕೈಗಳನ್ನು ಹಿಡಿದು ತಮ್ಮ ಎದೆ ಮೇಲಿಟ್ಟುಕೊಂಡು ಮುಖಂಡರೊಬ್ಬರು ಒಗ್ಗಟ್ಟಿನಿಂದ ಸಾಗೋಣ ಎಂಬ ಸಂದೇಶವನ್ನು ನೀಡಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್