ಫೆ.24 ರ ಶುಕ್ರವಾರ ಶ್ರೀಕ್ಷೇತ್ರ ಹೊಂಬುಜಾಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ – ಹುಂಚದಕಟ್ಟೆಯಲ್ಲಿ ಗ್ರಾಮ ವಾಸ್ತವ್ಯ|JDS

ತೀರ್ಥಹಳ್ಳಿ : ಫೆ 23 ಮತ್ತು 24 ರಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ನಡೆಯಲಿದ್ದು ಫೆ.24 ರ ಶುಕ್ರವಾರ ಶ್ರೀ ಕ್ಷೇತ್ರ ಹೊಂಬುಜಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.

ಫೆ.23 ರಂದು ಹುಂಚದಕಟ್ಟೆ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ಹೂಡಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ನಿಟ್ಟೂರು ನಾರಾಯಣ ಗುರು ಮಠಕ್ಕೆ ಭೇಟಿ ನೀಡಿ ನಂತರ ಹೊಂಬುಜಾ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.


ಕುಮಾರಸ್ವಾಮಿಯವರ ಪಂಚರತ್ನ ರಥಯಾತ್ರೆ ಸಾಗುವುದು ಹೇಗೆ?

ಫೆ.23 ರಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆ ನಡೆಯಲಿದ್ದು ನಂತರ ಗಾಜನೂರು,ಸಕ್ರೆಬೈಲು ಮಾರ್ಗವಾಗಿ ಸಂಜೆ ಕೋಣಂದೂರು ಪಟ್ಟಣದಲ್ಲಿ ಪಂಚರತ್ನ ರಥಯಾತ್ರೆಯ ಸಭೆ ನಡೆಯಲಿದೆ ನಂತರ ಹುಂಚದಕಟ್ಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.




ತಾಲೂಕಿನ ಹುಂಚದ ಕಟ್ಟೆಯಿಂದ ಹೊರಟು ಹುಂಚ ಪದ್ಮಾವತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಆರಗದಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. 12:30 ರಿಂದ ತೀರ್ಥಹಳ್ಳಿಯಲ್ಲಿ ರೋಡ್ ಶೋ ನಡೆಯಲಿದ್ದು ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಟಿಎಪಿಎಂಎಸ್ ಹಾಲ್ ನಲ್ಲಿ ಸಾರ್ವಜನಿಕರ ಸಭೆ ನಡೆಯಲಿದೆ. ತೀರ್ಥಹಳ್ಳಿಯ ಭೀಮನ ಕಟ್ಟೆ ಮಠದ ಗುರುಗಳನ್ನ ಮಧ್ಯಾಹ್ನ 3 ಗಂಟೆಗೆ ಭೇಟಿಯಾಗಲಿದ್ದು ನಂತರ 4:30 ಕ್ಕೆ ಮೇಗರವಳ್ಳಿಯ ಎಲೆ ಚುಕ್ಕಿ ತೋಟದ ವೀಕ್ಷಣೆ ಮತ್ತು ಸಭೆ ನಡೆಸಲಿದ್ದಾರೆ. ಸಂಜೆ 5:00ಗೆ ಹೆಗ್ಗೋಡಿನಲ್ಲಿ ಸಭೆ ಹಾಗೂ ಆರು ಗಂಟೆಗೆ ಕಮ್ಮರಡಿಯಲ್ಲಿ ಸಭೆ ನಡೆದು ಶೃಂಗೇರಿಗೆ ಹೊರಡಲಿದ್ದಾರೆ.

ಪಂಚರತ್ನ ರಥಯಾತ್ರೆಯಲ್ಲಿ ಯಾರ್ಯಾರು ಇರಲಿದ್ದಾರೆ

ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ, ಶಾರದಾ ಪುರ್ಯ ನಾಯಕ್,ಎಂ ಶ್ರೀಕಾಂತ್,  ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ.





ಈ ಬಗ್ಗೆ ತೀರ್ಥಹಳ್ಳಿ ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ತೀರ್ಥಹಳ್ಳಿ ಜೆಡಿಎಸ್ ಅಭ್ಯರ್ಥಿ ಯಡೂರ್ ರಾಜಾರಾಮ್ ಪಂಚರತ್ನ ಯಾತ್ರೆ ಬಗ್ಗೆ ಮಾಹಿತಿ ನೀಡಿದರು.

ನಂತರ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಾಗೂ ರಾಜ್ಯದಲ್ಲಿ ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಅಭಿವೃದ್ಧಿ ಎಂಬ ಹೆಸರಿನಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ತೀರ್ಥಹಳ್ಳಿಯಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಇಲ್ಲ. ರಸ್ತೆಗಳು ಆಗಿದ್ದರೂ ಸಹ ತೀರಾ ಕಳಪೆ ಕಾಮಗಾರಿಗಳು ಆಗಿವೆ. ಭಾರತಿಪುರದ ಟರ್ನಿಂಗ್ ನಲ್ಲಿ ಫ್ಲೈ ಓವರ್ ಅವಶ್ಯಕತೆ ಇತ್ತಾ?ತೀರ್ಥಹಳ್ಳಿಯಲ್ಲಿ ಈ ಬಾರಿ ಹಣವಂತರ ಹಾಗೂ ರೈತರ ನಡುವಿನ ಚುನಾವಣೆ ಆಗಲಿದೆ ಎಂದು  ಹೇಳಿದರು.

ನಾನೊಬ್ಬ ರೈತ ಕುಟುಂಬದಿಂದ ಬಂದಿರುವಂತಹ ವ್ಯಕ್ತಿ. ಚಿಕ್ಕ ಚಿಕ್ಕ ಸಭೆ ಸಮಾರಂಭಗಳಲ್ಲಿ ಬಾಗಿನದ ರೀತಿಯಲ್ಲಿ ಬೇರೆ ಬೇರೆ ರೀತಿಯ ನಾಣ್ಯಗಳು ಚಲಾವಣೆಗೆ ಬರುತ್ತಿದೆ. ಆದರೆ ನಮ್ಮ ಬಳಿ ಆ ರೀತಿಯ ವ್ಯವಸ್ಥೆ ಇಲ್ಲ. ಇತ್ತೀಚಿಗೆ ಗಾಜನೂರು ಬಳಿ ಒಬ್ಬ ಆಟೋ ಡ್ರೈವರ್ ತನ್ನ ದುಡಿಮೆಯಲ್ಲಿ 500 ರೂಪಾಯಿಗಳನ್ನು ನನಗೆ ನೀಡಿ ಠೇವಣಿ ಕಟ್ಟಲು ಇಟ್ಟುಕೊಳ್ಳಲು ಹೇಳಿದ್ದರು. ಅದೇ ರೀತಿ ಮೇಗರವಳ್ಳಿಯಲ್ಲೂ ಸಹ ಹತ್ತನೇ ತರಗತಿ ಓದುತ್ತಿರುವ  ಮುಸ್ಲಿಂ ಯುವತಿಯೊಬ್ಬಳು ತನ್ನ ತಂದೆ ತಾಯಿ ಕೊಟ್ಟಂತಹ ಹಣವನ್ನು ಶೇಖರಣೆ ಮಾಡಿ ಅಣ್ಣ ನೀವು ಇಟ್ಟುಕೊಳ್ಳಿ ಎಂದು ನನಗೆ ಕೊಟ್ಟಿದ್ದಳು. ಇದೇ ರೀತಿ ಕ್ಷೇತ್ರಾದ್ಯಂತ ಈ ಬಾರಿ ಹೊಸ ಹುಡುಗನನ್ನ ಬೆಳೆಸಬೇಕೆಂಬ ಜನಾಭಿಪ್ರಾಯ ಎಲ್ಲರಲ್ಲೂ ಇದೆ ಎಂದರು.




ಕಿಮ್ಮನೆ ರತ್ನಾಕರ್ ಮತ್ತು ಆರಗ ಜ್ಞಾನೇಂದ್ರ ಸರಿ ಸುಮಾರು 40 ವರ್ಷಗಳ ಕಾಲ ರಾಜಕಾರಣವನ್ನು ಮಾಡಿದ್ದಾರೆ. ಇದೊಂದು ಬಾರಿ ಅವರಿಬ್ಬರನ್ನು ಬದಲಾಯಿಸಬೇಕೆಂಬ ಜನಾಭಿಪ್ರಾಯ ಎಲ್ಲರಲ್ಲೂ ಇದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳು ಬಾಕಿ ಉಳಿದಿದೆ. ಪಟ್ಟಣದಲ್ಲಿ ಒಂದು ಒಳ್ಳೆಯ ಪಾರ್ಕ್ ಇಲ್ಲ. ಕೆರೆ ಹತ್ತಿರ ಇರುವಂತಹ ಪಾರ್ಕ್ ನಲ್ಲಿ ಕೋಟ್ಯಾಂತರ ರೂ ಹಣವನ್ನ ತಂದಿದ್ದರು ಪಾರ್ಕ್ ನಲ್ಲಿ ಮೊಟ್ಟು ಬೆಳೆದು ಕುಳಿತಿದೆ. ಕುಶಾವತಿ ಪಾರ್ಕ್ ನಲ್ಲಿ ಜಾರು ಬಂಡಿಯ ಪಕ್ಕದಲ್ಲಿ ಎತ್ತರವಾದ ಹುತ್ತ ಬೆಳೆದು ನಿಂತಿವೆ. ಯಾವುದೇ ರೀತಿಯ ಅಭಿವೃದ್ಧಿ ಮಾಡುತ್ತಿಲ್ಲ. ಒಂದಿಷ್ಟು ಕಾರ್ಯಕರ್ತರನ್ನು ಬೆಳೆಸಿಕೊಂಡು ಪಕ್ಷವನ್ನು ಬೆಳೆಸಿಕೊಂಡಿರುವುದು ಬಿಟ್ಟರೆ ಬೇರೇನು ಮಾಡಿಲ್ಲ ಅಭಿವೃದ್ಧಿಯ ವಿಚಾರದಲ್ಲಿ ಸಂಪೂರ್ಣವಾಗಿ ಹಿಂದೆ ಉಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರೀಕಾ ಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್, ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್, ಕಿರಣ್ ಪ್ರಭಾಕರ್, ನಟರಾಜ್, ತಲಬಿ ರಘು, ಶೈಲಜಾ, ಹೊದಲ ಶಿವು, ಮಂಜುನಾಥ್, ನೆಂಪೆ ಸುರೇಂದ್ರ ಸೇರಿ ಹಲವರು ಉಪಸ್ಥಿತರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

2 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

2 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

9 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago