ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು.
ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಇದು ಮಗುವಿನ ಬೆಳವಣಿಗೆ ಕುಂಠಿತಗೊಳಿಸುತ್ತಿದ್ದಲ್ಲದೆ, ಪ್ರಾಣಾಪಾಯವೂ ಇತ್ತು.ವೈದ್ಯರಿಗೆ ಮಗುವಿನ ಸಮಸ್ಯೆ ಏನೆಂದು ಗುರುತಿಸಲು ಮೂರು ವರ್ಷಗಳು ಬೇಕಾಯ್ತು. ನಂತರ ಪ್ರತಿ ತಿಂಗಳೂ ಹತ್ತಾರು ಸಾವಿರ ರೂ.ಗಳ ಮೆಡಿಸಿನ್ ಮತ್ತು ಚಿಕಿತ್ಸಾವೆಚ್ಚ ಭರಿಸಬೇಕಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ದುಬಾರಿ ಚಿಕಿತ್ಸಾ ವೆಚ್ಚ ಭರಿಸುವುದೇ ಅಸಾಧ್ಯ ಎನ್ನುವಂತಾಗಿತ್ತು. ಸದ್ಯ ಮಗುವಿಗೆ 5 ವರ್ಷ 4 ತಿಂಗಳಾಗಿದ್ದು, ಇನ್ನು ಚಿಕಿತ್ಸೆ ಕೊಡಿಸುವುದು ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಎದುರಾಗಿದ್ದು, ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಸಂಸದ ಬಿ.ವೈ. ರಾಘವೇಂದ್ರ ಅವರ ಗಮನ ಸೆಳೆದಿದ್ದಾರೆ.
ಸಮಸ್ಯೆಯನ್ನು ಅರಿತುಕೊಂಡ ಸಂಸದರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಗುವಿಗೆ 18 ವರ್ಷವಾಗುವವರೆಗೂ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ಕೈಗೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಮಗುವಿಗೆ ಸರ್ಕಾರದಿಂದ ಮೊದಲ ಔಷಧಿಗಳನ್ನು ಒದಗಿಸಲಾಗಿದ್ದು, ಸಂಸದರ ಬಿ.ವೈ. ರಾಘವೇಂದ್ರ ಮಗುವಿಗೆ ಔಷಧಿ ನೀಡಿ, ಶೀಘ್ರದಲ್ಲೇ ಮಗು ಎಲ್ಲ ಮಕ್ಕಳಂತೆ ಆರೋಗ್ಯವಾಗಿರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಬಿಜೆಪಿ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಇಟ್ಟಿಗೆಹಳ್ಳಿ ನಾಗೇಂದ್ರ, ಪ್ರಮುಖರಾದ ಸತೀಶ್, ಚೇತನ್ ಮತ್ತಿತರರಿದ್ದರು.
ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಮಗುವಿನ ಪೋಷಕರಾದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿ, ಮಗುವಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿಸುವ ಮೂಲಕ ತಮ್ಮ ಬದುಕಲ್ಲಿ ಭರವಸೆ ಮೂಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…