ಬಿಎಸ್​ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ್ರಾ ಪುತ್ರಿ ಅರುಣಾದೇವಿ – ಖುರ್ಚಿ ಅಲ್ಲಾಡಿಸಲು ಎಂತೆಂತಹ ಕೃತ್ಯಗಳು ನಡೆಸಿದ್ದಾರೆನ್ನುವುದನ್ನು ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ..!!!|BSY

ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ:

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ವಿಶೇಷ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ಬರ್ತ್​ಡೇ ದಿನವೇ ಶಿವಮೊಗ್ಗ ಏರ್​ಪೋರ್ಟ್​ ಲೋಕಾರ್ಪಣೆ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಗಿಫ್ಟ್​ ನೀಡಲಿದ್ದಾರೆ.




ಅಲ್ಲದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆನ್ನುವುದು ಯಡಿಯೂರಪ್ಪನವರ ಕನಸು ಸಹ ಆಗಿತ್ತು. ಇದೀಗ ಆ ಕನಸು ನನಸಾಗುತ್ತಿದೆ. ಇದರಿಂದ ತಮ್ಮ ಜನ್ಮದಿನದಂದು ಉದ್ಘಾಟನೆಯಾಗುತ್ತಿದ್ದರಿಂದ ಸಂತಸಗೊಂಡಿದ್ದಾರೆ.  ಇನ್ನು ತಂದೆಯ ಹುಟ್ಟುಹಬ್ಬದ ಸಂಬಂಧ ಮಾದ್ಯಮಗಳಿಗೆ ಪುತ್ರಿ ಅರುಣಾದೇವಿ ಪ್ರತಿಕ್ರಿಯಿಸಿ ಡೈರಿ ಬಾಂಬ್ ಸಿಡಿಸಿದ್ದಾರೆ.

ಇಂದು(ಫೆ.27) ಶಿವಮೊಗ್ಗದಲ್ಲಿ ಮಾತನಾಡಿದ ಯಡಿಯೂರಪ್ಪನವರ ಪುತ್ರಿ ಅರುಣಾದೇವಿ, ಇಡೀ ದೇಶದ್ಯಂತ ಹುಟ್ಟುಹಬ್ಬದ ಶುಭಾಶಯಗಳು ಬರ್ತಿದೆ. ನನ್ನ ಜೀವನ ಹಿಂದಿರುಗಿ ನೋಡಿದಾಗ ತೃಪ್ತಿ ತಂದಿದೆ ಎಂದಿದ್ದಾರೆ. 25 ವರ್ಷನ ಯುವಕನ ಶಿಸ್ತು ಇನ್ನೂ ಅವರಲ್ಲಿದೆ. ಯುವಕರಿಗೆ ಅವಕಾಶ ಕೊಟ್ಟಿದ್ದಾರೆ. ಅವರು ಮೂಲೆಯಲ್ಲಿ ಕೂರುತ್ತಿಲ್ಲ ರಾಜ್ಯಸುತ್ತಿ ಕೆಲಸ ಮಾಡುತ್ತಿದ್ದಾರೆ. ನಮ್ಮ ತಂದೆ ಜೈಲಿಗೆ ಹೋಗಿದ್ದು ಕರಾಳದಿನಗಳು ಅವರ  ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು ಮಾಡಿದ್ದರು. ಅ ಸಂದರ್ಭದಲ್ಲಿ ರಾಜಕೀಯ ಅಸಹ್ಯ ಅನ್ನಿಸಿತ್ತು ಎಂದು ಬಾವುಕರಾದರು.




ಜೈಲಿನಲ್ಲಿದ್ದಾಗ ನಮ್ಮ ತಂದೆ ಡೈರಿ ಬರೆದಿದ್ದಾರೆ. ಪ್ರತಿಯೊಂದು ಘಟನೆಯನ್ನ ಬರೆದಿದ್ದಾರೆ. ಸಂದರ್ಭ ಬಂದಾಗ ಅದು ಹೊರಬರುತ್ತೆ. ಹೊನ್ನಳ್ಳಿಯಲ್ಲಿ 1ಎಕರೆ ಜಾಗ ತೆಗದುಕೊಂಡು ಗದ್ದೆ ಮಾಡಿದ್ರು. ನೋವನ್ನ ಮರೆಯಲು ಕೃಷಿಯನ್ನ ಮಾಡಿದ್ದಾರೆ. ಹೊಲದಲ್ಲಿ ನೇಗಿಲು ಹಿಡಿದು ಕೆಲಸ ಮಾಡಿದ್ದಾರೆ. ನಮ್ಮ ತಾಯಿ ಸದಾ ಮೈತ್ರಾದೇವಿಯರು ಜೊತೆಗಿದ್ದಾರೆ. ಪ್ರತಿ ಶಿವರಾತ್ರಿ ದಿನ ನನ್ನ ತಾಯಿ ನೆನದು ಕಣ್ಣೀರು ಹಾಕುತ್ತಾರೆ. ನನ್ನ ತಾಯಿಯನ್ನ ನೆನದು ನಮ್ಮ ತಂದೆ ಬಿಎಸ್‌ವೈ ಕಣ್ಣೀರು ಹಾಕುತ್ತಾರೆ ಎಂದು ಬಾವುಕರಾದರು.

ಇನ್ನು ಅರುಣಾದೇವಿ ತಮ್ಮ ತಂದೆಯ ಹುಟ್ಟುಹಬ್ಬದ ದಿನವೇ ರಾಜ್ಯ ರಾಜಕಾರಣದಲ್ಲಿ ಡೈರಿ ಬಾಂಬ್ ಸಿಡಿಸಿದ್ದಾರೆ. ಇದು ಯಾವಾಗ? ಎಲ್ಲಿ? ಸಿಡಿಯುತ್ತೆ ಎನ್ನುವುದು ಕುತೂಹಲ ಮೂಡಿಸಿದೆ. ಯಡಿಯೂರಪ್ಪ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿದ್ದಾರೆ ಎನ್ನುವ ಬೇಸರ ಅವರ ಅಭಿಮಾನಿಗಳಲ್ಲಿದೆ. ಇದರ ಮಧ್ಯೆ ಇದೀಗ ಅರುಣಾ ಅವರು ತಂದೆಯ ಡೈರಿ ಬಗ್ಗೆ ಬಹಿರಂಗಪಡಿಸಿದ್ದು, ಆ ಡೈರಿಯಲ್ಲಿ ಏನಿದೆ? ಬಿಎಸ್​ವೈ ತಮ್ಮ ಡೈರಿಯಲ್ಲಿ ತಮ್ಮ ಪಕ್ಷದ ನಾಯಕ ಬಗ್ಗೆಯೇ ಬರೆದುಕೊಂಡಿದ್ದಾರಾ? ಎನ್ನುವ ಕುತೂಹಲ ಹುಟ್ಟುಹಾಕಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

6 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

16 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago