ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಸಿಎ ಓದುತ್ತಿದ್ದ ಯುವತಿ|sucide

ಶಿವಮೊಗ್ಗ : ಮದುವೆ ವಿಚಾರಕ್ಕೆ ಶಿವಮೊಗ್ಗದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಮದುವೆಯಾಗುವ ಹುಡುಗನ ಕಡೆಯವರು ಹುಡುಗಿಯ ಮನೆಗೆ ಬಂದು ಶೀಘ್ರ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಲ್ಲದೆ, ಹುಡುಗಿಗೆ ಮದುವೆಗೆ ಮನಸ್ಸಿಲ್ಲ ಎಂದರೆ ಹೋಗಿ ಸಾಯಿ ಎಂದು ಬೈದಿದ್ದರಿಂದ ಶಿವಮೊಗ್ಗದ ಬೊಮ್ಮನಕಟ್ಟೆಯ ಯುವತಿ ಸುಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಲಾಗಿದೆ.




ಸುಮಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ನಗರದ ಕಾಲೇಜೊಂದರಲ್ಲಿ ಎಂಸಿಎ ಎರಡನೆಯ ವರ್ಷ ಓದುತ್ತಿದ್ದರು. 2019ರಲ್ಲಿ ನ್ಯಾಮತಿ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಓದು ಮುಗಿದ ಮೇಲೆ ವಿವಾಹವಾಗುವ ಬಗ್ಗೆ ಮಾತುಕತೆಯಾಗಿತ್ತು ಎನ್ನಲಾಗಿದೆ.

ಏನಿದು ಪುಕರಣ ?

ಎಂಸಿಎ ಓದುತ್ತಿದ್ದ ವಿದ್ಯಾರ್ಥಿನಿ ಸುಮಾಳಿಗೆ ಎರಡು ವರ್ಷದ ಹಿಂದೆಯೇ ಮದುವೆ ಪ್ರಸ್ತಾಪ ಬಂದಿತ್ತು. ಮನೆಯವರೆಲ್ಲ ಸೇರಿಕೊಂಡು ಕಂಕನಹಳ್ಳಿಯ ಪ್ರವೀಣ್ ಜತೆ ಮದುವ ಮಾಡಲು ಮುಂದಾಗಿದ್ದರು. ಆದರೆ ಎಂಸಿಎ ಮಾಡುವ ಕನಸು ಕಟ್ಟಿಕೊಂಡಿದ್ದ ಸುಮಾ ಎರಡು ವರ್ಷ ಮದುವೆ ಮುಂದೂಡಿದ್ದಳು. ಈ ನಡುವ ಪ್ರವೀಣ್ ತನ್ನನ್ನು ಮದುವೆ ಆಗುವಂತೆ ಫೋನ್‌ನಲ್ಲಿ ಒತ್ತಾಯ ಮಾಡುತ್ತಿದ್ದಲ್ಲದೆ, ಕಾಲೇಜು, ಬಸ್‌ ನಿಲ್ದಾಣದ ಬಳಿ ಬಂದು ಪೀಡಿಸುತ್ತಿದ್ದ ಎನ್ನಲಾಗಿದೆ.




ಮದುವೆ ಮುಂದೂಡುತ್ತಿದ್ದ ಸುಮಾಳ ವರ್ತನೆಯಿಂದ ಕಂಗೆಟ್ಟಿದ್ದ ಪ್ರವೀಣ್ ಕುಟುಂಬದವರು ಕಳೆದ ಫೆಬ್ರವರಿ 9ರಂದು ಸುಮಾಳ ಮನೆಗೆ ಬಂದಿದ್ದರು. ಈ ವೇಳೆ ಮದುವೆ ಮಾಡಿಕೊಳ್ಳುವಂತೆ ಒತ್ತಡ ಹಾಕಿದ್ದರು. ಆದರೆ ಎಂಸಿಎ ಮುಗಿಯುವವರೆಗೆ ಮದುವೆ ಆಗುವುದಿಲ್ಲ ಎಂದು ಸುಮಾ ಪಟ್ಟು ಹಿಡಿದಿದ್ದಳು ಎನ್ನಲಾಗಿದೆ.  ಇದರಿಂದ ಸಿಟ್ಟಿಗೆದ್ದ ಪ್ರವೀಣ್ ಕುಟುಂಬದವರು ಗಲಾಟೆ ಮಾಡಿದ್ದು ನಿಂದಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಾಯಿ ಎಂದಿದ್ದಾರೆ ಎಂದು ದೂರಲಾಗಿದೆ.




ಇದರಿಂದ ನೊಂದ ಸುಮಾ ಅದೇ ದಿನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಆಕೆಯನ್ನುಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರ ಚಿಕಿತ್ಸೆ  ಫಲಿಸದೇ ಸುಮಾ ಮೃತಪಟ್ಟಿದ್ದಾಳೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

7 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago