ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿ ಓಂರಾಜ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ನಾಯ್ಕ್ ಮತ್ತು ಮಧುಸೂಧನ್ ಇದ್ದರು