ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ.
ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ ಕಡಿಮೆಯಾಗಿಲ್ಲ.
ಇನ್ನೂ ಮುಂದೆ ಪಟ್ಟಣದಲ್ಲಿ ಕರ್ಕಶ ಶಬ್ದ ಮಾಡುವ ವಾಹನಗಳ ಮಾಲೀಕರು ಸ್ವಯಂ ಪ್ರೇರಿತರಾಗಿ  ಸೈಲೆನ್ಸರ್ ಬದಲಾಯಿಸಿದಲ್ಲಿ ಭಾರಿ ದಂಡದಿಂದ ತಪ್ಪಿಸಿಕೊಳ್ಳಬಹುದಾಗಿದೆ.
ಕಾರ್ಯಾಚರಣೆಯಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ , ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ಮತ್ತು ಮಧುಸೂಧನ್ ಇದ್ದರು.
ಕರ್ಕಶ ಶಬ್ದದಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತಿದ್ದ ಪುಂಡರಿಗೆ ತಕ್ಕ ಪಾಠ ಕಲಿಸಿರುವ ರಿಪ್ಪನ್‌ಪೇಟೆ ಪೊಲೀಸರ ಕಾರ್ಯ ವೈಖರಿಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
		 
                         
                         
                         
                         
                         
                         
                         
                         
                         
                        