ರಿಪ್ಪನ್ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು.
ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು.
ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ ,ಚೌಡೇಶ್ವರಿ ವೃತ್ತ ,ತಿಲಕ್ ನಗರ ವೃತ್ತ ಮತ್ತು ಮದೀನಾ ವೃತ್ತಗಳಲ್ಲಿ ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಸುವಂತೆ ಮನವಿ ಮಾಡಿದರು.
ಮನವಿಯನ್ನು ಆಲಿಸಿದ ಸಂಸದರು ಅತೀ ಶೀಘ್ರದಲ್ಲೇ ವಿದ್ಯುತ್ ಹೈಮಾಸ್ಕ್ ಬೀದಿ ದೀಪಗಳನ್ನು ಅಳವಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುವ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೆ ರಾವ್ , ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ , ಮುಖಂಡರಾದ ಆರ್ ಟಿ ಗೋಪಾಲ್, ಪಿ ರಮೇಶ್ ,ಸುರೇಶ್ ಸಿಂಗ್, ಸುಂದರೇಶ್ ,ಕಗ್ಗಲಿ ಲಿಂಗಪ್ಪ ,ಸುಧೀಂದ್ರ ಪಿ , ಸಚಿನ್ ಗೌಡ ,ರಾಜೇಂದ್ರ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್