ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು.




ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ ಹೂಳೆತ್ತುವುದರಿಂದ ಕೆರೆಗಳಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ವೃದ್ದಿಯಾಗುವುದು ಅಲ್ಲದೆ ಬೇಸಿಗೆಯಲ್ಲಿ ಸಹ ಜನಜಾನುವಾರುಗಳಿಗೆ ಕುಡಿಯಲು ನೀರು ದೊರೆಯುವುದು, ಇದರಿಂದಾಗಿ ಗ್ರಾಮದ ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗುತ್ತದೆ ಎಂದರು.


ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ  ನಿರ್ದೇಶಕ ಜೆ.ಚಂದ್ರಶೇಖರ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನೆಯ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.




ಈ ಸಂಧರ್ಭದಲ್ಲಿ ಹೊಸನಗರ ತಾಲ್ಲೂಕ್ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಬೇಬಿ,ಗ್ರಾಪಂ ಉಪಾಧ್ಯಕ್ಷೆ ಮಹಾಲಕ್ಷಿ, ಚಿಕ್ಕಬೀರನ ಕೆರೆ ಸಮಿತಿಯ ಅಧ್ಯಕ್ಷ  ಎನ್.ಸತೀಶ್ ಉಪಾಧ್ಯಕ್ಷ ಅಮೀರ್ ಹಂಜಾ,ಎಂ.ಬಿ.ಮಂಜುನಾಥ್,ಚಂದ್ರಶೇಖರ್ ನಿರ್ದೇಶಕರು ಶಿವಮೊಗ್ಗ ಜಿಲ್ಲೆ ,ಧರ್ಮಸ್ಥಳ ಕೆರೆ ಅಭಿವೃದ್ಧಿ ಅಭಿಯಂತರರು ಗಣಪತಿ,ತಾಲೂಕ್ ಕೃಷಿ ಅಧಿಕಾರಿ ಶಶಿಧರ್, ವಲಯ ಮೇಲ್ವಿಚಾರಕಿ ಪೂರ್ಣಿಮಾ,ವಲಯ ಸೇವಾ ಪ್ರತಿನಿಧಿಗಳಾದ ವಸಂತ ,ಸುಚಿತ್ರ ,ಜಯಂತಿ ,ರಾಜೇಶ್ವರಿ ,ರಮ್ಯಾಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಪಿಡಿಓ ಪಾಲ್ಗೊಂಡಿದ್ದರು.

ಕಾರ್ಯಕ್ರಮದಿಂದ ಹೊರ ನಡೆದ ಗ್ರಾಪಂ ಸದಸ್ಯರು :

ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿ ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಿಬ್ಬರು ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರ ನಡೆದ ಪ್ರಸಂಗ ನಡೆಯಿತು.

ಕಾರ್ಯಕ್ರಮದ ಗುದ್ದಲಿ ಪೂಜೆ ಸಂಧರ್ಭದಲ್ಲಿ ಮುಂಚೂಣಿಯಲ್ಲಿದ್ದ ಸದಸ್ಯರಾದ ಆಸೀಫ಼್ ಭಾಷಾ ಮತ್ತು ನಿರೂಪ್ ಕುಮಾರ್ ಸಭಾ ಕಾರ್ಯಕ್ರಮ ಪ್ರಾರಂಭವಾಗುತಿದ್ದಂತೆ ಹೊರನಡೆದರು.ಗ್ರಾಪಂ ಪಿಡಿಓ ಮನವೊಲಿಸಲು ಯತ್ನಿಸಿದರಾದರೂ ಫಲ ನೀಡಲಿಲ್ಲ.ಯಾವ ಕಾರಣಕ್ಕಾಗಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರನಡೆದಿದ್ದಾರೆಂಬ ಮಾಹಿತಿ ತಿಳಿದು ಬಂದಿರುವುದಿಲ್ಲ.


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

30 minutes ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

5 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

19 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

19 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago