ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು.
ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಹಾಲುಗುಡ್ಡೆ ಶ್ರೀ ಹಾಲೇಶ್ವರ ದೇವಸ್ಥಾನ, ಕೋಡೂರು ಶಂಕರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಪೂಜಾ ಕಾರ್ಯಕ್ರಮಗಳು ಜರುಗಿದವು.
ಹಾಲುಗುಡ್ಡೆ ಮತ್ತು ನೆವಟೂರು ಹಾಲೇಶ್ವರ ಈಶ್ವರ ದೇವಸ್ಥಾನದಲ್ಲಿ ಮಳಲಿಮಠದ ಡಾ.ಗುರುನಾಗಭುಷಣ ಶಿವಾಚಾರ್ಯ ಮಹಾಸ್ವಾಮೀಜಿಯವರಿಂದ ರುದ್ರಾಭಿಷೇಕ ವಿಶೆಷ ಪೂಜೆ ಮತ್ತು ಧರ್ಮ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.