ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಬಳಿ ಚಲಿಸುತಿದ್ದ ಕೆ ಎಸ್ ಆರ್ ಟಿಸಿ ಬಸ್ ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದು ಓರ್ವ ವ್ಯಕ್ತಿಗೆ ಗಂಭೀರ ಪೆಟ್ಟಾಗಿರುವ ಘಟನೆ ನಡೆದಿದೆ.
ಬೈಕ್ ಸವಾರ ದಾನಪ್ಪ(68) ಗಂಭೀರ ಗಾಯಗೊಂಡಿದ್ದಾರೆ.
ಭಟ್ಕಳ – ಬೆಂಗಳೂರು ಮಾರ್ಗದ ಕೆ ಎಸ್ ಆರ್ ಟಿಸಿ ಬಸ್ ಚಾಲಕ ಗವಟೂರು ಬಳಿ ಎದುರುಗಡೆ ವಾಹನ ಬಂದ ಹಿನ್ನಲೆಯಲ್ಲಿ ಬ್ರೇಕ್ ಹಾಕಿದ್ದಾನೆ ಹಿಂಬದಿ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಬರುತಿದ್ದ ಚಾಲಕ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರವಾದ ಪೆಟ್ಟಾಗಿದೆ.
ತಕ್ಷಣ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.