ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು.
ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು.
ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಘಟನೆಯ ಹಿನ್ನಲೆ :
ವಿದ್ಯುತ್ ತಂತಿ ತುಳಿದು ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಸಾವನ್ನಪ್ಪಿರುವ ಘಟನೆ ನಂಜವಳ್ಳಿ ಗ್ರಾಮದಲ್ಲಿ ನಡೆದಿತ್ತು.
ಅಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದರು
ಮೂಲತಃ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾಗಿದ್ದ ಶೇಷಗಿರಿ ಜಮೀನು ಖರೀದಿಸಿ ಹರತಾಳು ಗ್ರಾಮದಲ್ಲಿ ವಾಸಿಸುತ್ತಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್