ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು.
ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ.
ವಿಮಾನದಲ್ಲಿ SPG ತಂಡ
ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು.
ವಾಯುಸೇನೆಯ ಇಲ್ಯೂಷಿನ್ 76 ವಿಮಾನದಿಂದ ನಾಲ್ಕು ಕಾರುಗಳನ್ನು ಕೆಳಗಿಳಿಸಿ ಪರಿಶೀಲನೆ ಆರಂಭಿಸಿತು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಜಿಲ್ಲಾಧಿಕಾರಿ ಸೇರಿ ಪ್ರಮುಖ ಅಧಿಕಾರಿಗಳನ್ನು SPG ತಂಡ ಭೇಟಿಯಾಯಿತು.
ಬಳಿಕ ವಿಮಾನ ನಿಲ್ದಾಣದ ಟರ್ಮಿನಲ್ ಪರಿಶೀಲನೆ ನಡೆಸಿತು. ಅಲ್ಲಿಂದ ನೇರವಾಗಿ ತಮ್ಮ ವಾಹನಗಳ ಮೂಲಕವೆ ಶಿವಮೊಗ್ಗ ನಗರಕ್ಕೆ SPG ತಂಡ ತೆರಳಿತು.