ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ.
ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು.
ಫೆ.2ರಂದು ಮಧ್ಯಾಹ್ನ ಈ ಯುವಕನಿಗೆ ಅಪರಿಚಿತ ಮೊಬೈಲ್ ನಂಬರಿನಿಂದ ಮಹಿಳೆಯೊಬ್ಬರು ಕರೆ ಮಾಡಿ, ತನ್ನನ್ನು ಮೋನಿಕಾ ಎಂದು ಪರಿಚಯಿಸಿಕೊಂಡಿದ್ದಾಳೆ. ತಾನು ಶಿವಮೊಗ್ಗ ಏರ್ ಪೋರ್ಟ್ ಅಥಾರಿಟಿಯ ಎಚ್.ಆರ್, ಎಂದು ಹೇಳಿ ಯುವಕನನ್ನು ನಂಬಿಸಿದ ಆಕೆ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೀವು ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ. ಇದರ ರಿಜಿಸ್ಟ್ರೇಷನ್ ಗೆ ಹಣ ಪಾವತಿಸಬೇಕು ಎಂದು ತಿಳಿಸಿದ್ದಾಳೆ.
ಈ ರೀತಿ ಹಂತ ಹಂತವಾಗಿ ಫೋನ್ ಪೇ ಮೂಲಕ 72,900 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾಳೆ. ಆ ಬಳಿಕ ಯುವಕನಿಗೆ ತಾನು ವಂಚನೆಗೊಳಾಗಿರುವುದು ಗೊತ್ತಾಗಿದೆ. ಬಳಿಕ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್