ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.




ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ವಿದ್ಯಾರ್ಹತೆ ಹಾಗೂ ವಯೋಮಿತಿಯನ್ನೂ ನೀಡಲಾಗಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಮತ್ತು ಡಿಪ್ಲೋಮಾ ಆದ 40 ವರ್ಷ ಒಳಗಿನ ಯುವಕ-ಯುವತಿಯರು ಬೇಕಾಗಿದ್ದಾರೆ ಎಂದು ಇ-ಮೇಲ್‌ನ ನಕಲಿ ಐಡಿ ಮೂಲಕ ಜಾಹೀರಾತು ನೀಡಲಾಗುತ್ತಿದೆ.




ಉದ್ಯೋಗವಕಾಶಕ್ಕಾಗಿ ಹಾತೊರೆಯುತ್ತಿರುವವರನ್ನು ಗುರಿಯಾಗಿಸಿಕೊಂಡು ಇಂತಿಷ್ಟು ಹಣ ಕಟ್ಟಿ ಎನ್ನುವ ಭೋಗಸ್​ ಕಂಪನಿಗಳು ಶಿವಮೊಗ್ಗ ನಗರದಲ್ಲಿ ತನ್ನದೆ ನೆಟ್​ವರ್ಕ್​ ನಲ್ಲಿ ಕೆಲಸ ಮಾಡುತ್ತಿವೆ. ಅಂತಹ ಕಂಪನಿಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಇನ್ನೂ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಅಧಿಕಾರಿ ವಲಯದ ಮೂಲಗಳ ಪ್ರಕಾರ, ಇದುವರೆಗೂ ಏರ್​ಪೋರ್ಟ್ಗೆ ಸಂಬಂಧಿಸಿದ ಉದ್ಯೋಗವಕಾಶಗಳ ಬಗ್ಗೆ ಪ್ರಕಟಣೆಯು ಸಹ ಹೊರಬಿದ್ದಿಲ್ಲ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! - ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 hour ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

9 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

22 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago