ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಅಭಿವೃದ್ಧಿಯ ಸಂಕೇತ – ಬಿಎಸ್ ವೈ ಭಾವುಕ ನುಡಿ|BSY


ಇದೊಂದು ಕೇವಲ ವಿಮಾನ ನಿಲ್ದಾಣವಲ್ಲ. ಮಲೆನಾಡಿನ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಅಭಿವೃದ್ಧಿ ಮತ್ತಷ್ಟು ವೇಗ ಪಡೆದು ಆಗಸದೆತ್ತರಕ್ಕೆ ಏರುವ ಶುಭ ಸೂಚನೆ. ಶಿವಮೊಗ್ಗದ ಜನ ಹಾಗೂ ಶಿಕಾರಿಪುರದ ಜನರು ನನ್ನನ್ನು ಶಾಸಕನನ್ನಾಗಿ ಮಾಡಿ ನಾಡಿನ ಜನರ ಸೇವೆಗೆ ಅವಕಾಶ ನೀಡಿಕೊಟ್ಟಿದ್ದಾರೆ. ಮೋದಿಯವರ ಆಶೀರ್ವಾದದಿಂದ ಸಂಸತ್ ಸದಸ್ಯ, ವಿಧಾನ ಪರಿಷತ್‌ ಸದಸ್ಯ, ಮುಖ್ಯಮಂತ್ರಿಯಾಗಿ ಸೇವೆಗೆ ಅವಕಾಶ ಸಿಕ್ಕಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾವುಕರಾಗಿ ನುಡಿದರು.



ಶಿವಮೊಗ್ಗ ಬಳಿಯ ಸೋಗಾನೆಯಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವವೇ ಮೆಚ್ಚುವಂತೆ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ರಾಷ್ಟ್ರಕವಿ ಕುವೆಂಪು ಅವರು ತಿಳಿಸಿದ ವಿಶ್ವ ಮಾನವ ತತ್ವಕ್ಕೆ ಉದಾಹರಣೆಯಾಗಿದೆ. ಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು ಎಂಬ ಕವಿವಾಣಿಯಂತೆ ಈ ನಾಡಿನ ಅಭಿವೃದ್ಧಿ ಕನಸಿನೊಂದಿಗೆ 70ರ ದಶಕದಲ್ಲಿ ಸಾರ್ವಜನಿಕ ಬದುಕು ಪ್ರವೇಶಿಸಿದ ನನ್ನ ಬದುಕಿನಲ್ಲಿ ಈ ದಿನ ಬಹಳ ವೈಶಿಷ್ಟ್ಯಪೂರ್ಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನೇರವಾಗಿ ವಿಮಾನದಲ್ಲಿ ಬಂದಿಳಿದು ವಿಮಾನ ನಿಲ್ದಾಣವನ್ನು ಉದ್ಘಾಟಿಸಿರುವುದು ಜಿಲ್ಲೆಯ ಜನರ ಪಾಲಿಗೆ ಸಾರ್ಥಕದ ದಿನವಾಗಿದೆ ಎಂದು ಹೇಳಿದರು.



ಸಂಸದ ರಾಘವೇಂದ್ರ ಅವರ ವಿಶೇಷ ಪ್ರಯತ್ನದಿಂದ ವಿಮಾನ ನಿಲ್ದಾಣ ಆಗಿದೆ. ಮೋದಿಯವರ ಒತ್ತಾಸೆ ಮೇರೆಗೆ ಶಿವಮೊಗ್ಗ ಲೋಕಸಭೆಗೆ ಸ್ಪರ್ಧಿಸಿದಾಗ ಬೃಹತ್ ಅಂತರದಲ್ಲಿ ಜಯಗಳಿಸುವಂತೆ ಮಾಡಿ ಸೇವೆಗೆ ಅವಕಾಶ ಲಭಿಸಿತ್ತು. ನಾನು ಅಧಿಕಾರದಲ್ಲಿದ್ದದ್ದು ಕೇವಲ 7 ವರ್ಷ ಮಾತ್ರ. ಈ ಅವಧಿಯಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎಂದು ಕೆಲಸ ಮಾಡಿದ್ದೇನೆ. ಅದಕ್ಕೆ ಮೋದಿಯವರ ಆಶೀರ್ವಾದ ಕಾರಣ. ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿವೃದ್ಧಿಯ ಪ್ರೇರಣೆಯೇ ನಮ್ಮ ಕರ್ನಾಟಕ. ಈ ಕಾರಣಕ್ಕೆ ಕರ್ನಾಟಕದ ಬೆಳವಣಿಗೆಗೆ ವಿಶೇಷ ಆಸಕ್ತಿಯನ್ನು ವಹಿಸಿದ್ದಾರೆ. ಅಣ್ಣ ಬಸವಣ್ಣನವರ ಕಾಯಕತತ್ವದಿಂದ ಪ್ರೇರಣೆ ಪಡೆದಿದ್ದಾರೆ. ವಿಶ್ವದ ಯಾವುದೇ ಮೂಲೆಗೆ ಹೋದರೂ ಬಸವಣ್ಣನವರ ವಚನ ಉಲ್ಲೇಖಿಸುತ್ತಾರೆ ಎಂದರು.

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಗ್ರಾಮೀಣ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಹೇಳಿದ್ದರು. ನಮ್ಮ ಡಬಲ್ ಇಂಜಿನ್ ಸರ್ಕಾರ ಎಲ್ಲ ಸೌಕರ್ಯಗಳನ್ನೂ ಗ್ರಾಮೀಣ ಭಾಗಕ್ಕೆ ಜೋಡಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತಿದ್ದೇವೆ. ಹುಟ್ಟುಹಬ್ಬ ಆಚರಣೆಯಲ್ಲಿ ಹೆಚ್ಚು ಆಸಕ್ತಿಯಿಲ್ಲ. 60 ವರ್ಷದ ಕಾರ್ಯಕ್ರಮದಲ್ಲಿ ವಾಜಪೇಯಿ ಅವರು ಆಗಮಿಸಿದ್ದರು. ಇವತ್ತು 80 ನೇ ವರ್ಷವು ನಿಮ್ಮಿಂದಾಗಿ ಸ್ಮರಣೀಯವಾಗಿದೆ ಎಂದು ಭಾವುಕರಾಗಿ ಹೇಳಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

6 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

16 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago