ಶಿವ ನಾಮಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು
ರಿಪ್ಪನ್‌ಪೇಟೆ : ಸಂಸ್ಕೃತಿ ಸಂಸ್ಕಾರ ಪ್ರತಿಯೊಬ್ಬರು ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ನೆಮ್ಮದಿಯಿಂದ ಕೂಡಿರುತ್ತದೆ. ಶಿವರಾತ್ರಿಯ ದಿನ ಮಾತ್ರ ಶಿವನಾಮಸ್ಮರಣೆ ಮಾಡಿದರೆ ಸಾಲದು ನಿತ್ಯ ಶಿವಮಂತ್ರ ಪಠಿಸುವುದರಿಂದ ಸಂಕಷ್ಟ ಹರಿಹಾರವಾಗುವುದು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡಯ ಇತಿಹಾಸ ಪ್ರಸಿದ್ದ ಹಾಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಹಾಶಿವರಾತ್ರಿಯ ಅಂಗವಾಗಿ ಹಾಲೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಧರ್ಮಸಭೆಯ ದಿವ್ಯಸಾನಿಧ್ಯ ವಹಿಸಿ ಅಶೀರ್ವಚನ ನೀಡಿ ಬಾಲ್ಯದಲ್ಲಿ ವಿದ್ಯೆ ಯವ್ವನದಲ್ಲಿ ಸಂಪತ್ತು.ಗಳಿಸಬೇಕು.ಇವೆರಡು ಜೀವನಕ್ಕೆ ಅಮೂಲ್ಯ ಭೌತಿಕ ಸಂಪತ್ತು ಎಷ್ಟು ಮುಖ್ಯವೋ ಅಷ್ಟೇ ಆಧ್ಯಾತ್ಮಿಕ ಜೀವನಕ್ಕೆ ಮುಖ್ಯ.ಮಕ್ಕಳಿಗೆ ಗುರುಹಿರಿಯರಿಗೆ ತಂದೆ ತಾಯಿಗಳ ಬಗ್ಗೆ ಗೌರವಿಸುವ ಭಾವನೆಗಳು ತುಂಬ ಬೇಕು ಎಂದು ಶ್ರೀಗಳು ನುಡಿದರು.ಮಹಾಶಿವರಾತ್ರಿಯಲ್ಲಿ ಜಾಗರಣೆಯೊಂದಿಗೆ ಜಾಗೃತಿ ಹೊಂದಬೇಕು ಧರ್ಮದ ಪಥದಲ್ಲಿ ಸಾಗುವಂತಾಗಬೇಕು ಎಂದು ಹೇಳಿದರು.
ಹಾಲೇಶ್ವರ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಜಯದೇವಗೌಡರು ಅಧ್ಯಕ್ಷತೆ ವಹಿಸಿದ್ದರು.
ಧರ್ಮಸಭೆಯಲ್ಲಿ ಹೆಚ್.ಎಸ್.ರವಿ, ಯೋಮಕೇಶಪ್ಪಗೌಡರು.ವಾಸಪ್ಪಗೌಡರು, ಷಣ್ನುಖಪ್ಪಗೌಡರು,ಶೇಷಪ್ಪಗೌಡರು,ಎನ್.ವರ್ತೇಶ್‌ಗೌಡರು,ಹರೀಶ್‌ಗೌಡ.
ಉಮೇಶ್‌ಗೌಡರು ಗಂಟೆ,ಈಚಲುಗುಡ್ಡೇರೆ ಮನೆ ರಾಜೇಂದ್ರಗೌಡ, ನವೀನಗೌಡರು, ಗಂಟೆ ಪುಟ್ಟರಾಜ ಗೌಡ,ಇನ್ನಿತರ ಹಾಲುಗುಡ್ಡೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹೆಚ್.ಎಸ್.ರವಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್