ಕಾರು ಮತ್ತು ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ 24 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಶೃತಿ(24) ಮೃತಪಟ್ಟಿರುವ ಯುವತಿಯಾಗಿದ್ದು ಶಿವಮೊಗ್ಗದ ಸಿಟಿ ಸೆಂಟರ್ ನಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಸಾಗರ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಭೇಟಿ ನೀಡಿ ಮೃತದೇಹ ಮರಣೋತ್ತರ ಪರೀಕ್ಷೆಗೆ ಸಾಗರ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದ್ದು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.