ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಕಳೆದೊಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ಆಗ ಬಾಲಕಿಯ ತಾಯಿ ಶಾಲೆಯ ಶಿಕ್ಷಕಿಯಲ್ಲಿ ಶಿಕ್ಷಕನಿಗೆ ಬುದ್ದಿ ಹೇಳಲು ಹೇಳಿದ್ದಾರೆ. ಆದರೆ ಆದರೆ ಶಿಕ್ಷಕಿ ಘಟನೆಯ ಬಗ್ಗೆ ಪಾಲಕರಿಗೆ ಯಾವುದೇ ಮಾಹಿತಿ ನೀಡಿಲ್ಲ.
ಬಾಲಕಿಯ ಮನೆಗೆ ಪಿಎಸ್‌ಐ ಸುಷ್ಮಾ ನೇತೃತ್ವದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿಯವರು ಆಗಮಿಸಿದ್ದು ವಿಚಾರಣೆಗಾಗಿ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಸುರಭಿ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು ಅಲ್ಲಿ ಶಾಲೆಯಲ್ಲಿ ಶಿಕ್ಷಕ ನೀಡಿದ ಕಿರುಕುಳದ ಬಗ್ಗೆ ತಾಯಿಯ ಸಮಕ್ಷಮದಲ್ಲಿ ಬಾಲಕಿ ಹೇಳಿಕೆ ನೀಡಿದ್ದಾಳೆ.
ರಿಪ್ಪನ್‌ಪೇಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಶಿಕ್ಷಕ, ಶಿಕ್ಷಕಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.