ಹುಂಚ ಸಮೀಪದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ದ ಪೋಕ್ಸೋ ಪ್ರಕರಣ ದಾಖಲು|pocso

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.




ಕಳೆದೊಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ಆಗ ಬಾಲಕಿಯ ತಾಯಿ ಶಾಲೆಯ ಶಿಕ್ಷಕಿಯಲ್ಲಿ ಶಿಕ್ಷಕನಿಗೆ ಬುದ್ದಿ ಹೇಳಲು ಹೇಳಿದ್ದಾರೆ. ಆದರೆ ಆದರೆ ಶಿಕ್ಷಕಿ ಘಟನೆಯ ಬಗ್ಗೆ ಪಾಲಕರಿಗೆ ಯಾವುದೇ ಮಾಹಿತಿ ನೀಡಿಲ್ಲ.




ಬಾಲಕಿಯ ಮನೆಗೆ ಪಿಎಸ್‌ಐ ಸುಷ್ಮಾ ನೇತೃತ್ವದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿಯವರು ಆಗಮಿಸಿದ್ದು ವಿಚಾರಣೆಗಾಗಿ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಸುರಭಿ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು ಅಲ್ಲಿ ಶಾಲೆಯಲ್ಲಿ ಶಿಕ್ಷಕ ನೀಡಿದ ಕಿರುಕುಳದ ಬಗ್ಗೆ ತಾಯಿಯ ಸಮಕ್ಷಮದಲ್ಲಿ ಬಾಲಕಿ ಹೇಳಿಕೆ ನೀಡಿದ್ದಾಳೆ.

ರಿಪ್ಪನ್‌ಪೇಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಶಿಕ್ಷಕ, ಶಿಕ್ಷಕಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

10 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

23 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

1 day ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

1 day ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

1 day ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago