ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ(ಹುಲಿಕಲ್) ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಯಾವೆಲ್ಲ ಬದಲಿ ಮಾರ್ಗ?
ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು. ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯಲ್ಲಿ ಸಂಚರಿಸಬಹುದು.
ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ -ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗದಲ್ಲಿ ಸಂಚರಿಸಬೇಕು.
ಶಿವಮೊಗ್ಗ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆಗೆ ಹೋಗುವ ಲಘು ಮತ್ತು ಭಾರಿ ವಾಹನಗಳಿಗು ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಈ ವಾಹನಗಳು ಹೊಸನಗರ – ನಗರ – ಕೊಲ್ಲೂರು ರಸ್ತೆಯಲ್ಲಿ ಸಂಚರಿಸಬೇಕು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್