ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ – ಬಿಎಸ್ ವೈ ಗೆ ಹಸಿರು ಶಾಲು ಹೊದಿಸಿ ವಿಶೇಷ ಸನ್ಮಾನ ಮಾಡಿದ ಮೋದಿ|modi
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ರವರು ಸೋಗಾನೆಯ ನೂತನ ವಿಮಾನ ನಿಲ್ದಾಣದೊಂದಿಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಿದ್ದಾರೆ. 7,165 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು. 995 ಕೋಟಿ ವೆಚ್ಚದ 96 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಅಡಿಗಲ್ಲು ಹಾಗೂ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ಶಂಕುಸ್ಥಾಪನೆ , 105 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, 953 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. 66.44 ಕೋಟಿ ವೆಚ್ಚದ ಬೈಂದೂರು-ರಾಣೆಬೆನ್ನೂರು…