ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ
ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್ಪಿಎಸ್ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…