ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ|church

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ ರಿಪ್ಪನ್‌ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು…

Read More

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…

Read More

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ  ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…

Read More

ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…

Read More

ಸ್ನೇಹಿತರ ಜೊತೆ ಸೇರಿ ಹೆಂಡತಿಯ ಕೊಲೆಗೆ ಯತ್ನಿಸಿದ್ದ ಪತಿರಾಯ – ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್: ಈ ಸುದ್ದಿ ನೋಡಿ|court

ಮಹಿಳೆಯೋರ್ವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 22 ಸಾವಿರ ರೂ ದಂಡ ವಿಧಿಸಿ‌ದೆ. 2016 ರಲ್ಲಿ ಶಿವಮೊಗ್ಗದ ಮಲವಗೊಪ್ಪ ಬಡಾವಣೆಯಲ್ಲಿ ಶೋಭಾ(26) ಮತ್ತು ಪತಿ ಹಾಲೇಶ್ ನಾಯ್ಕನಿಗೂ ಕೌಟಂಬಿಕ‌ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದರಿಂದ 2016 ರಲ್ಲಿ ಶೋಭಾ ತನ್ನ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ನಿಂತಾಗ ಹಾಲೇಶ್ ನಾಯ್ಕ ಹರಿತವಾದ ಆಯುಧದಿಂದ ಆಕೆಯ ತಲೆ ಹಾಗೂ…

Read More

ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ – ಚಕ್ರದಡಿ ಸಿಲುಕಿಕೊಂಡ ಸ್ಕೂಟರ್ : ಸ್ಥಳದಲ್ಲಿಯೇ ಓರ್ವ ಸಾವು|accident

ಶಿವಮೊಗ್ಗ : ಮಲ್ಲಿಗೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ ಬಳಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್‌ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್‌ ಬಸ್‌ ಚಕ್ರದಡಿ ಸಿಲುಕಿಕೊಂಡಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನನ್ನು ಜಾರ್ಖಂಡ್ ಮೂಲದ ಯುವಕ ಅನ್ಸಾರಿ ಎನ್ನಲಾಗುತ್ತಿದೆ.  ಸ್ಥಳಕ್ಕೆ ಸಂಚಾರಿ ಪಶ್ಚಿಮ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಮರಣೋತ್ತರ…

Read More

ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident

ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‌ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…

Read More

ಬಡ ಬಾಲಕನ ಚಿಕಿತ್ಸೆಗೆ ವ್ಯವಸ್ಥೆ – ಮಾನವೀಯತೆ ಮೆರೆದ ಸಂಸದ ಬಿ ವೈ ರಾಘವೇಂದ್ರ|BYR

ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ…

Read More

ರಿಪ್ಪನ್‌ಪೇಟೆ : ಕರ್ಕಶ ಶಬ್ದ ಮಾಡುತಿದ್ದ ಬೈಕ್ ಸೈಲೆನ್ಸರ್ ಗಳನ್ನು ಸೈಲೆಂಟ್ ಮಾಡಿದ ಪೊಲೀಸರು|silencers

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ. ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ…

Read More