ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಿ – ನನ್ನದು ಕೇವಲ ಅಳಿಲು ಸೇವೆ – ಬಿ ಎಸ್ ಯಡಿಯೂರಪ್ಪ|BSY
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು. ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ…