ಆನಂದಪುರ : ಇಲ್ಲಿನ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆನಂದಪುರ ಬಸವನ ಬೀದಿ ನಿವಾಸಿ ಶರತ್ (28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಆನಂದಪುರದ ಬಸವನ ಬೀದಿಯ ನಿವಾಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೋಪಾಲ್ ರವರ ಮಗ ಶರತ್ ಆನಂದಪುರ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ .
ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ದೇಹ ದೊರಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದಿಲ್ಲ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿರುತ್ತಾರೆ.