w
Headlines
Home » ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು.





ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು.


ಪ್ರಧಾನಿ ಅವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್‌ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು.




ಅಧಿಕಾರಿಗಳು ತಮಗೆ ನೀಡಲಾಗುವ ಜವಾಬ್ದಾರಿ ಯನ್ನು ಸರಿಯಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಪಿಡಬ್ಲುಡಿ ಚೀಫ್ ಇಂಜಿನಿಯರ್ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.