ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಸಮೀಪದಲ್ಲಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಸ್ಯಾಂಟ್ರೋ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ಪಟ್ಟಣದ ಗವಟೂರು ಗ್ರಾಮದ ಬೋಟಿ ವ್ಯಾಪಾರಿ ತವಾಮಣಿ (45) ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಸೆವಾಮಣಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಯಾಂಟ್ರೋ ಕಾರಿನಲ್ಲಿದ್ದ ಶಿವಮೊಗ್ಗ ನಿವಾಸಿಗಳಾದ ಪ್ರಜ್ವಲ್ ಮತ್ತು ಅಭಿ ಎಂಬುವವರಿಗೆ ಕಾಲಿಗೆ ಪೆಟ್ಟಾಗಿದ್ದು,ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ
ಗಾಯಾಳುಗಳಿಗೆ ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಅಪಘಾತದಲ್ಲಿ ಎರಡು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.