Headlines

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport


ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ.



ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ. 



ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ ಎಂದು ತಿಳಿಸಿದ್ದಾರೆ. 

ಈ ಬಗ್ಗೆ ಅಧಿವೇಶನದಲ್ಲಿ ನಾನೇ ಪ್ರಸ್ತಾವನೆಯನ್ನು ಮಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *