ಶಿವಮೊಗ್ಗ – ಹರಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ ವಶ|election

Shivamogga ಮಾ.31: ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಹರಕೆರೆ ಚೆಕ್ ಪೋಸ್ಟ್ ನಲ್ಲಿ 1 ಕೋಟಿ 39 ಲಕ್ಷ ರೂ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿರುವ ವೇಳೆ ಯಾವುದೇ ದಾಖಲೆಯಿಲ್ಲದೆ ಹರಕೆರೆ ಚೆಕ್ ಪೋಸ್ಟ್ ನಲ್ಲಿ ಸಾಗಿಸುತ್ತಿದ್ದ ಬೊಲೆರೋ ವಾಹನದಲ್ಲಿ 1 ಕೋಟಿ 39 ಲಕ್ಷ ರೂ. ಹಣ ಪತ್ತೆಯಾಗಿದೆ. ಕಾರು ತಪಾಸಣೆ ನಡೆಸಿದಾಗ 1 ಕೋಟಿ ರೂ. ನಗದು…

Read More

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಕು|| ಪ್ರಣತಿ ಅಣ್ಣಪ್ಪ ರವರಿಗೆ ಶಾಸಕರಿಂದ ಸನ್ಮಾನ|pranathi

ರಿಪ್ಪನ್‌ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ…

Read More

ನವ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವು|crime news

ಶಿವಮೊಗ್ಗ : ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ.  ಆಕೆಯ ಸಾವಿಗೆ ಸ್ಪಷ್ಟವಾದ…

Read More

ತೀರ್ಥಹಳ್ಳಿ : ಹನಿಟ್ರ್ಯಾಪ್ ಮೂಲಕ ಸೆರೆ ಸಿಕ್ಕ ಒಂಟಿ ಸಲಗ – ಬಂಡೀಪುರ ಅಭಯಾರಣ್ಯಕ್ಕೆ ಪುಂಡಾನೆಯ ರವಾನೆ|elephant

ತೀರ್ಥಹಳ್ಳಿ : ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.  ತಾಲೂಕಿನ ದೇವಂಗಿಯ ಮಳೂರು ಕಾಡಿನಲ್ಲಿ ಆನೆ ಸೆರೆ ಹಿಡಿಯಲಾಯಿತು. ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಚುಚ್ಚು ಮದ್ದಿನ ಇಂಜೆಕ್ಷನ್ ಡಾರ್ಟ್ ಮಾಡಿ ಸೆರೆ ಹಿಡಿದಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಕಾಡಾನೆ ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿತ್ತು….

Read More

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ – ಯುವಕ ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ :  ಕುಂಚೇನಹಳ್ಳಿ ಕೆರೆಯ ಬಳಿಯ ಹಳ್ಳಕ್ಕೆ ಬಿದ್ದ ಬೈಕ್ ಸವಾರನೊಬ್ಬ ಸಾವು ಕಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಸಂತೆಕಡೂರಿನ ನಿವಾಸಿಗಳಾದ ನಾಗೇಶ್ ಮತ್ತು ದರ್ಶನ್ ಎಂಬುವರು ಕುಂಚೇನಹಳ್ಳಿ ತಾಂಡದಲ್ಲಿ ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿಕೊಂಡು ವಾಪಾಸ್ ಶಿವಮೊಗ್ಗಕ್ಕೆ ಹಿಂದಿರುಗುವಾಗ ನಿಯಂತ್ರಣ ತಪ್ಪಿ ಬೈಕ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ನಾಗೇಶ್ ಬೆನ್ನಿಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಹ ಸವಾರ ದರ್ಶನ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಾಗೇಶ್ ಗಾರೆ…

Read More

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಇಲ್ಲಿದೆ ಅಗತ್ಯ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ.  ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಅಧಿಕಾರಿಗಳು ಆದೇಶ…

Read More

ನಾಳೆ(31-03-2023) ರಿಪ್ಪನ್‌ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಸುಸಜ್ಜಿತ ಶ್ರೀ ನಂದಿ ಹಾಸ್ಪಿಟಲ್

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ. ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ  ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು: * 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ. * ಮಕ್ಕಳ ಡಾಕ್ಟರ್…

Read More

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More