ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ|Inauguration

ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ 

ರಿಪ್ಪನ್‌ಪೇಟೆ : ಶಾಸಕರಾದವರಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು ಜೊತೆಯಲ್ಲಿ ಅಭಿವೃದ್ದಿಗಾಗಿ ಸರ್ಕಾರದ ಅನುದಾನವನ್ನು ತರುವ ಎದೆಗಾರಿಕೆ ಇರಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.




ರಿಪ್ಪನ್‌ಪೇಟೆಯ ವ್ಯಾಪ್ತಿಯಲ್ಲಿ ಬರುವ ಸಾಗರ ತೀರ್ಥಹಳ್ಳಿ ಮಾರ್ಗದ ಅಂದಾಸುರ ಬಳಿಯಲ್ಲಿನ ಶಿಥಿಲಗೊಂಡ ಸಂಪರ್ಕ ಸೇತುವೆಗೆ 2.40 ಕೋಟಿ ವೆಚ್ಚದ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಚಂದಾಲದಿಂಬ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಕಾಮಗಾರಿ ವೀಕ್ಷಣೆ ಮತ್ತು ಗವಟೂರು ಗ್ರಾಮದ ಕಾಂಕ್ರೇಟ್ ರಸ್ತೆ  ಕಾಮಗಾರಿ ಉದ್ಘಾಟನೆ ಬರುವೆ ಶಬರಿಶ ನಗರದ ಸಂಪರ್ಕ ರಸ್ತೆಗೆ 35 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕಳೆದ ನಾಲ್ಕುವರೆ ವರ್ಷದ ಅವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ  ಬರುವ 888 ಸಂಪರ್ಕ ರಸ್ತೆಗಳ ಅಭಿವೃದ್ದಿ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಹೆಚ್ಚು ಅಧ್ಯತೆ ನೀಡುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಶ್ರಮಿಸಿದ್ದೇನೆ ಎಂದರು.




ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿ ಒಂದು ಕಿ.ಮೀ ರಸ್ತೆ ಡಬಲ್ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುತ್ತಿದ್ದು ಅತಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸುವುದಾಗಿ ತಿಳಿಸಿ ಮುಂದಿನ ಎರಡು ವರ್ಷದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೆ ಏರಿಸುವುದಾಗಿ ಭರವಸೆ ನೀಡಿದರು.




ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ,ಜಿ.ಪಂ.ಮಾಜಿ ಸದಸ್ಯೆ ಎ.ಟಿ.ನಾಗರತ್ನ,ಗ್ರಾ.ಪಂ.ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ , ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ,, ಮೆಣಸೆ ಅನಂದ,ನಾಗಾರ್ಜುನಸ್ವಾಮಿ, ರಾಮಚಂದ್ರ ಹರತಾಳು, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಸುದೀಂದ್ರಪೂಜಾರಿ,ವಿನೋಧ,ಇನ್ನಿತರ ಗ್ರಾಮ ಪಂಚಾಯ್ತಿ ಸದಸ್ಯರು ಪಕ್ಷದ ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *