ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ  ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.
ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಆಗಮಿಸಿದ ಶಾಸಕ ಹರತಾಳು ಹಾಲಪ್ಪ ಗ್ಯಾರೇಜ್ ಮಾಲೀಕರಾದ ಸುರೇಶ್ ರವರಿಗೆ ಸಾಂತ್ವಾನ ಹೇಳಿ ವೈಯಕ್ತಿಕ ಧನ ಸಹಾಯ ಮಾಡಿದರು.
ಬಸವಾಪುರದಲ್ಲಿ ಅಡಿಕೆ ತೋಟ ಸುಟ್ಟು ಭಸ್ಮ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ನಾಗರಾಜ ಪಿ ಎಂಬುವವರಿಗೆ
ಸೇರಿದ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ 200 ಕ್ಕೂ ಅಧಿಕ ಅಡಿಕೆ ಸಸಿಗಳು ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ತೋಟದಲ್ಲಿದ್ದ ನೀರಿನ ಪೈಪ್ ಗಳು ಸೇರಿದಂತೆ 200 ಕ್ಕೂ ಅಧಿಕ ಅಡಿಕೆ ಸಸಿಗಳು ಸುಟ್ಟ ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ.
ಇಂದು ಸ್ಥಳಕ್ಕೆ ಆಗಮಿಸಿದ ಶಾಸಕ ಹರತಾಳು ಹಾಲಪ್ಪ ಬೆಂಕಿಗಾಹುತಿಯಾದ ತೋಟವನ್ನು ವೀಕ್ಷಿಸಿ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿ ವೈಯಕ್ತಿಕ ಧನ ಸಹಾಯ ಮಾಡಿದರು.
		 
                         
                         
                         
                         
                         
                         
                         
                         
                         
                        

