ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ.
ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ.
ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಹೆಬ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಸ್ ನಲ್ಲಿದ್ದವರೆಲ್ಲಾ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕೆರೆ ಗ್ರಾಮದ ನಿವಾಸಿಗಳು ಎನ್ನಲಾಗುತಿದ್ದು ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಕೊಪ್ಪ ಬಂದು ಹಿಂದಿರುಗುತಿದ್ದಾಗ ಈ ಅಪಘಾತ ಸಂಭವಿಸಿದೆ.
ಬಸ್ ಚಾಲಕನ ಸಮಯ ಪ್ರಜ್ಞೆ ಮತ್ತು ಬ್ರೇಕ್ ವಿಫಲಗೊಂಡ ಬಸ್ಸನ್ನು ನಿಯಂತ್ರಿಸಿ ಪ್ರಯಾಣಿಕರ ಪ್ರಾಣ ಉಳಿಸಿದ ಚಾಣಾಕ್ಷತನವನ್ನು ಎಲ್ಲರೂ ಮೆಚ್ಚಿ ಕೃತಜ್ಞತೆ ಸಲ್ಲಿಸಿದ್ದಾರೆ.