ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಬೈಕ್ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಹಾನಗಲ್ ಕಡೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಟಿಟಿಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಆನವಟ್ಟಿಯ ದುರ್ಗಮ್ಮ ಬೀದಿಯ ಕೀರ್ತಿರಾಜ್ (22) ಮೃತ ದುರ್ದೈವಿಯಾಗಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೀರ್ತಿರಾಜ್ ಅವರಿಗೆ ಆನವಟ್ಟಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಕೀರ್ತಿರಾಜ್ ಮೃತಪಟ್ಟಿದ್ದಾರೆ.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.