ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಇಲ್ಲಿದೆ ಅಗತ್ಯ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.




ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ.

ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರ ಯಾವುದೇ ಗೊಂದಲ, ಆತಂಕಗಳಿದ್ದರೆ ಪರಿಹರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಾಯವಾಣಿ ಆರಂಭಿಸಿದ್ದು, 080-23310075/76ಕ್ಕೆ ಕರೆ ಮಾಡಬಹುದಾಗಿದೆ.

SSLC ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ ಇಂತಿದೆ

ಮಾರ್ಚ್‌ 31-ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ

ಏಪ್ರಿಲ್‌ 3-ಗಣಿತ ಹಾಗೂ ಸಮಾಜ ಶಾಸ್ತ್ರ

ಏಪ್ರಿಲ್‌ 6-ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ

ಏಪ್ರಿಲ್‌ 8-ಅರ್ಥಶಾಸ್ತ್ರ, ಏಪ್ರಿಲ್‌ 10-ವಿಜ್ಞಾನ, ರಾಜ್ಯಶಾಸ್ತ್ರ

ಏಪ್ರಿಲ್‌ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ

ಏಪ್ರಿಲ್‌ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ


ವಿದ್ಯಾರ್ಥಿಗಳ ಭವಿಷ್ಯದ ದಿಕ್ಕನ್ನು ನಿರ್ಧರಿಸುವ ಜೀವನದ ಅತ್ಯಮೂಲ್ಯ ಘಟ್ಟವಾದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಸನ್ನದ್ದರಾಗಿರುವ ಎಲ್ಲಾ ಪ್ರೀತಿಯ ವಿದ್ಯಾರ್ಥಿಗಳಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ವತಿಯಿಂದ ಶುಭ ಹಾರೈಕೆಗಳು….

ವಿದ್ಯಾರ್ಥಿಗಳೇ ಈ ಸಲಹೆಗಳನ್ನು‌ ಮರೆಯದೇ ಪಾಲಿಸಿ:

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುವುದು ಹಾಗೂ ಪೋಷಕರು ಗಲಿಬಿಲಿಗೆ ಗುರಿಯಾಗುವುದು ಸಾಮಾನ್ಯ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಒತ್ತಡಕ್ಕೆ ಒಳಗಾಗದೆ ಪರೀಕ್ಷೆ ಬರೆಯಲು 10 ಸಲಹೆಗಳನ್ನು ಇಲ್ಲಿ ನೀಡಲಾಗಿದೆ. ಇದನ್ನು ಮರೆಯದೆ ಪಾಲಿಸಿ.



* ಹಾಲ್ ಟಿಕೆಟ್, ಕಾಲೇಜ್ ಐಡಿ ಕಾರ್ಡ್ ಯಾವುದೇ ಕಾರಣಕ್ಕೂ ಮರೆಯಬೇಡಿ. ಪರೀಕ್ಷೆಗೆ ಬೇಕಾದ ಪೆನ್ಸಿಲ್, ರಬ್ಬರ್, 2-3 ಪೆನ್ ಹಾಗೂ ಇತರ ಸಲಕರಣೆಗಳು ಇವೆಯೇ ಎಂದು ಪರೀಕ್ಷಿಸಿಕೊಳ್ಳಿ. ಸಾಧ್ಯವಾದರೆ ಹಿಂದಿನ ದಿನವೇ ಬ್ಯಾಗಿನಲ್ಲಿ ಇದನ್ನೆಲ್ಲಾ ಹಾಕಿ ಸಿದ್ದಪಡಿಸಿಟ್ಟುಕೊಳ್ಳಿ.

* ನಿಮ್ಮ ರಿಜಿಸ್ಟರ್ ನಂಬರ್ ಬರೆದ ಜಾಗದಲ್ಲೇ ಕುಳಿತುಕೊಳ್ಳಿ. ಪರೀಕ್ಷೆ ಹಾಲಿಗೆ ಕನಿಷ್ಟ ಅರ್ಧ ಗಂಟೆ ಮೊದಲು ತಲುಪಿ. ತಡವಾದರೂ ಚಿಂತೆ ಬೇಡ. ನಿಯಮಗಳ ಪ್ರಕಾರ 9.45ರವರೆಗೆ ಪರೀಕ್ಷಾ ಕೊಠಡಿಗೆ ಪ್ರವೇಶ ಪಡೆಯಲು ನಿಮಗೆ ಅವಕಾಶವಿದೆ.

* ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ. ಗೊತ್ತಿಲ್ಲದ ಪ್ರಶ್ನೆಗಳಿಗೆ ಸಮಯ ಉಳಿದರೆ ಕೊನೆಯಲ್ಲಿ ಉತ್ತರಿಸುವ ಪ್ರಯತ್ನ ಮಾಡಿ.

* ಪ್ರಶ್ನೆ ಪತ್ರಿಕೆಯಲ್ಲಿರುವ ಪ್ರಶ್ನೆಗಳನ್ನು ವಿವರವಾಗಿ ಓದಿ ಅರ್ಥೈಸಿಕೊಳ್ಳಿ. ಪ್ರಶ್ನೆ ಪತ್ರಿಕೆಯಲ್ಲಿರುವ ಸೂಚನೆಗಳನ್ನು ಸರಿಯಾಗಿ ಓದಿ ಪಾಲಿಸಿ.

* ಉತ್ತರ ಪತ್ರಿಕೆಯ ಮೇಲೆ ನಿಮ್ಮ ಹಾಲ್ ಟಿಕೆಟ್ ನಂಬರನ್ನು ಸರಿಯಾಗಿ ನಮೂದಿಸಿ. ಈ ಬಾರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಬೇರೆ ಬೇರೆಯಾಗಿರುವುದರಿಂದ ಪ್ರಶ್ನೆಗಳ ಸಂಖ್ಯೆಯನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ನಮೂದಿಸಿ.[ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ]

* ಪರೀಕ್ಷೆಯ ಹಿಂದಿನ ದಿನ ರಾತ್ರಿ ಇಡೀ ಓದಿ ನಿದ್ದೆ ಬಿಡಬೇಡಿ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

* ಯಾವುದೇ ಕಾರಣಕ್ಕೂ ಕಾಪಿ ಮಾಡುವ ಪ್ರಯತ್ನಗಳಿಗೆಲ್ಲಾ ಕೈ ಹಾಕಿ ಇಕ್ಕಟ್ಟಿಗೆ ಸಿಲುಕಿಕೊಳ್ಳಬೇಡಿ. ಫೇಲ್ ಆದರೂ ಪರವಾಗಿಲ್ಲ, ಸಪ್ಲಿಮೆಂಟರಿ ಪರೀಕ್ಷೆ ಬರೆದು ಪಾಸ್ ಆಗಬಹುದು. ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರಕ್ಕೆ ನಿರ್ಬಂಧಿತ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಲೇಬೇಡಿ.

* ಆಹಾರವನ್ನು ಸರಿಯಾಗಿ ಸೇವಿಸಿ. ಆರೋಗ್ಯದ ಮೇಲೆ ಪರಿಣಾಮ ಬೀರುವ ಆಹಾರಗಳಿಂದ ಆದಷ್ಟು ದೂರವಿರಿ. ಯಾವುದೆ ಕಾರಣಕ್ಕೂ ಟೆನ್ಶನ್ ಮಾಡಿಕೊಳ್ಳಬೇಡಿ. ಒತ್ತಡದಲ್ಲಿ ಮರೆತು ಹೋಗುವ ಸಾಧ್ಯತೆಗಳು ಜಾಸ್ತಿಯಾಗಿರುತ್ತವೆ.

* ಕೊನೆಯ 10 ನಿಮಿಷಗಳನ್ನು ಉಳಿಸಿಕೊಂಡು ಬರೆದ ಉತ್ತರ, ರಿಜಿಸ್ಟರ್ ನಂಬರ್ ಸರಿಯಾಗಿದೆಯೇ ಎಂದು ಮರು ಪರೀಕ್ಷಿಸಿಕೊಳ್ಳಿ.


ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ;

ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು. ಇತರೆ ಕಾರಣಗಳಿಗೆ ಖಜಾನೆಯ ಸ್ಟ್ರಾಂಗ್ ರೂಮ್ ತೆರೆಯುವ ಪ್ರಸಂಗ ಬಂದರೆ, ಬಿ.ಇ.ಓ ನೇತೃತ್ವದ 3 ಜನರ ಸಮಿತಿ ಮಾಹಿತಿ ನೀಡಿ ಅವರ ಹಾಜರಿಯಲ್ಲಿ ಸ್ಟ್ರಾಂಗ್ ರೂಮ್ ತೆರೆಯಬೇಕು. ಪ್ರಶ್ನೆ ಪತ್ರಿಕೆಗಳಿಗೆ ಯಾವುದೇ ರೀತಿಯಲ್ಲಿ ಹಾನಿ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಇಲಾಖೆ ಸೂಚನೆ ನೀಡಿದೆ.



ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ. ಪರೀಕ್ಷೆ ಬರೆಯವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಹೊರತು ಪಡೆಸಿ ಅನ್ಯರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಂತಿಲ್ಲ. ನಕಲು ಹಾಗೂ ಇತರೆ ಅಕ್ರಮಗಳು ನಡೆಯದಂತೆ ಕಡಿವಾಣ ಹಾಕಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌರ್ಯಗಳ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಪೋನ್, ಸ್ಮಾರ್ಟ್ ಫೋನ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ಕೊಂಡಯ್ಯಲು ಅವಕಾಶವಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ ಇರಬೇಕು.

ವಿದ್ಯಾರ್ಥಿಗಳು ಸಮವಸ್ತ್ರಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಿದ್ದು, ಹಿಜಾಬ್ ಧರಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ. ಕನಿಷ್ಟ ಒಂದು ಗಂಟೆಗೂ ಮೊದಲೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದ ಜತೆಗೆ ತೆರಳಿ ಪರೀಕ್ಷಾ ಕೊಠಡಿಯನ್ನು ಹುಡಿಕಿಕೊಳ್ಳಬೇಕಿದೆ.

KSRTC-BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಈಗಾಗಲೇ ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು ತನ್ನ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಈಗ ಮುಂದುವರೆದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು( Karnataka SSLC Main Exam 2023 ) ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.

ಈ ಬಗ್ಗೆ ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಿದೆ. ಅಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ( SSLC Students ) ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎಂದಿದೆ.

ಈ ಹಿನ್ನಲೆಯಲ್ಲಿ ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಪರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಾಸ್ಸು ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಕೇಂದ್ರಕ್ಕೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ( Admit Card ) ಉಚಿತವಾಗಿ ಪ್ರಯಾಣವನ್ನು ಅನುಮತಿಸುವಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರುಗಳಿಗೆ ಸೂಚಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

13 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

14 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

14 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago