ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.




ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು.


ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ ಇರಾದೆಯಲ್ಲಿದ್ದೇವು ಆದರೆ ಜಿಲ್ಲಾಧಿಕಾರಿಗಳು ಬಾರದೇ ಇರುವುದು ನಿರಾಸೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೆಮೈತೆ,ಕರಿಗೆರಸು ಭಾಗದಲ್ಲಿ  ನೀರಿನ ಸಮಸ್ಯೆ ಬಹಳಷ್ಟಿದ್ದು ಅರಣ್ಯ ಅಧಿಕಾರಿಗಳು ಬೋರ್ ವೆಲ್ ಕೊರೆಸಲು ಅನುಮತಿ ನೀಡುತ್ತಿಲ್ಲ ಇದರಿಂದ ಜನ ಜಾನುವಾರು ,ಅಡಿಕೆ ತೋಟ ಹಾಗೂ ಇನ್ನಿತರ ಕೃಷಿ ಚಟುವಟಿಗಳಿಗೆ ಸಂಚಕಾರ ಉಂಟಾಗಿದೆ ಎಂದು ತಮ್ಮ ಅಳಲನ್ನು ತೀಡಿಕೊಂಡರು.

ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಮಾತನಾಡಿ ಸಾಕಷ್ಟು ಜನ ರೈತರು ಪಹಣಿ ತಿದ್ದುಪಡೆ ಪಿಂಚಣಿ ಸೌಲಭ್ಯ ಪಡೆಯುವದು ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರಕ್ಕೆ ಹಾಗೂ ತಾಲೂಕಾ ಕೇಂದ್ರಕ್ಕೆ ಬರುತ್ತಾರೆ ಕೆಲ ಸಮಯದಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಇಲ್ಲದಿರುವುದರಿಂದ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ ಇದನ್ನೆಲ್ಲ ಗಮನಿಸಿದ ಸರ್ಕಾರ ಗ್ರಾಮೀಣ ಭಾಗದ ಜನರ ಮನೆ ಭಾಗಿಲಿಗೆ ಸರ್ಕಾರದ ಯೋಜನೆ ಮುಟ್ಟಿಸುವಲ್ಲಿ ಇಂತಹ ಕಾರ್ಯಕ್ರಮ ಗಳನ್ನು ಆಯೋಜಿಸುತ್ತದೆ ಇದರಲ್ಲಿ ತಾವುಗಳು ಅರ್ಜಿ ಸಲ್ಲಿಸುವ ಮೂಲಕ ಸ್ಥಳದಲ್ಲಿ ಯೇ ತಮ್ಮ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳ ಬಹುದಾಗಿದೆ ಎಂದರು.

ಇಂದಿನ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಇತ್ಯರ್ಥ ಪಡಿಸಲಾಗುವುದು ಎಂದು ಗ್ರಾಮಸ್ಥರನ್ನು ಸಮಾಧಾನ ಪಡಿಸಿದರು.

ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಿ

ನಮ್ಮೂರಿನ ಪ್ರತಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದು ಗ್ರಾಮದ ಸ್ವಾಸ್ಥ್ಯವನ್ನು ಹಾಳುಗೆಡವುತಿದ್ದಾರೆ,ಸಂಬಂಧಪಟ್ಟ ಅಬಕಾರಿ ಅಧಿಕಾರಿಗಳ ಗಮನಕ್ಕೆ ತಂದರೆ ಕವಡೆ ಕಾಸಿನ ಕಿಮ್ಮತ್ತು ಕೊಡುತಿಲ್ಲ ಎಂದು ಸಭೆಯಲ್ಲಿ ಗ್ರಾಮಸ್ಥರು ತಮ್ಮ ಆಕ್ರೋಶವನ್ನು ಅಧಿಕಾರಿಗಳ ಮುಂದೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತಿ ಸದಸ್ಯ ಎನ್ ಪಿ ರಾಜು ಮಾತನಾಡಿ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿ ಅಂಗಡಿಗಳಲ್ಲೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಶಾಲಾ ಮಕ್ಕಳ ಮೇಲೂ ದುಷ್ಪರಿಣಾಮ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು,ಈ ಬಗ್ಗೆ ಚಿಕ್ಕಜೇನಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಕಳಿಸಿಕೊಡಲಾಗಿತ್ತು ಆದರೆ ಈ ಬಗ್ಗೆ ಇಲ್ಲಿಯವರೆಗೂ ಅಧಿಕಾರಿಗಳು ಯವುದೇ ಜಾಣಕುರುಡು ಪ್ರದರ್ಶಿಸುತ್ತಿರುವುದು ನಾಗರೀಕರಲ್ಲಿ ಅಸಮಾಧಾನ ಮೂಡಿಸಿದೆ.




ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ತಹಶೀಲ್ದಾರರ ಬಳಿ ಮನವಿ ಮಾಡಿದರು.

ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಗ್ರೇಡ್ 2 ಉಪ ತಹಶೀಲ್ದಾರ್ ರಾಕೇಶ್ ಹಳ್ಳಿಯ ಜನರು ಸಣ್ಣಪುಟ್ಟ ಸಮಸ್ಯೆ ಎದುರಾದಾಗಾಲೂ ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ.

ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಪಾವತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಸಂಬಂಧ ಡಿಸಿಗಳ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕ್ರಮ ಕೈಗೊಳ್ಳಬೇಕಿದೆ.

ಅಕ್ರಮ ಮದ್ಯ ಮಾರಾಟ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂಧರ್ಭದಲ್ಲಿ ಚಿಕ್ಕಜೇನಿ ಗ್ರಾಪಂ ಅಧ್ಯಕ್ಷೆ ರಾಧಮ್ಮ ಉಪಾಧ್ಯಕ್ಷರಾದ ಗಾಯತ್ರಿ,ಗ್ರಾಪಂ ಸದಸ್ಯರು, ಉಪ ತಹಶೀಲ್ದಾರ್ ಹುಚ್ಚರಾಯಪ್ಪ ,ಕಂದಾಯ ಅಧಿಕಾರಿಗಳಾದ ಸೈಯದ್ ಅಫ಼್ರೋಜ಼್,ಪಿಡಿಓ ಮಂಜುಳಾ ಹಾಗೂ ಗ್ರಾಮಸ್ಥರು ಇದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

13 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago