ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ|Inauguration

ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಶಾಸಕರಾದವರಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು ಜೊತೆಯಲ್ಲಿ ಅಭಿವೃದ್ದಿಗಾಗಿ ಸರ್ಕಾರದ ಅನುದಾನವನ್ನು ತರುವ ಎದೆಗಾರಿಕೆ ಇರಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.




ರಿಪ್ಪನ್‌ಪೇಟೆಯ ವ್ಯಾಪ್ತಿಯಲ್ಲಿ ಬರುವ ಸಾಗರ ತೀರ್ಥಹಳ್ಳಿ ಮಾರ್ಗದ ಅಂದಾಸುರ ಬಳಿಯಲ್ಲಿನ ಶಿಥಿಲಗೊಂಡ ಸಂಪರ್ಕ ಸೇತುವೆಗೆ 2.40 ಕೋಟಿ ವೆಚ್ಚದ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಚಂದಾಲದಿಂಬ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ ಕಾಮಗಾರಿ ವೀಕ್ಷಣೆ ಮತ್ತು ಗವಟೂರು ಗ್ರಾಮದ ಕಾಂಕ್ರೇಟ್ ರಸ್ತೆ ಕಾಮಗಾರಿ ಉದ್ಘಾಟನೆ ಬರುವೆ ಶಬರಿಶ ನಗರದ ಸಂಪರ್ಕ ರಸ್ತೆಗೆ 35 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕಳೆದ ನಾಲ್ಕುವರೆ ವರ್ಷದ ಅವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ  ಬರುವ 888 ಸಂಪರ್ಕ ರಸ್ತೆಗಳ ಅಭಿವೃದ್ದಿ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಹೆಚ್ಚು ಅಧ್ಯತೆ ನೀಡುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಶ್ರಮಿಸಿದ್ದೇನೆ ಎಂದರು.




ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿ ಒಂದು ಕಿ.ಮೀ ರಸ್ತೆ ಡಬಲ್ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುತ್ತಿದ್ದು ಅತಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸುವುದಾಗಿ ತಿಳಿಸಿ ಮುಂದಿನ ಎರಡು ವರ್ಷದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೆ ಏರಿಸುವುದಾಗಿ ಭರವಸೆ ನೀಡಿದರು.




ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ,ಜಿ.ಪಂ.ಮಾಜಿ ಸದಸ್ಯೆ ಎ.ಟಿ.ನಾಗರತ್ನ,ಗ್ರಾ.ಪಂ.ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ , ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ,, ಮೆಣಸೆ ಅನಂದ,ನಾಗಾರ್ಜುನಸ್ವಾಮಿ, ರಾಮಚಂದ್ರ ಹರತಾಳು, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಸುದೀಂದ್ರಪೂಜಾರಿ,ವಿನೋಧ,ಇನ್ನಿತರ ಗ್ರಾಮ ಪಂಚಾಯ್ತಿ ಸದಸ್ಯರು ಪಕ್ಷದ ಮುಖಂಡರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

15 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

18 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

18 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

19 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago