ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ ಬಳಿಯ ಹಳ್ಳಿ ಬೈಲು ಗ್ರಾಮದ 54 ವರ್ಷದ ವ್ಯಕ್ತಿಗೆ ಕೆಎಫ್ಡಿ ಪಾಸಿಟಿವ್ ದೃಢಪಟ್ಟಿದೆ.
ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಖಾಯಿಲೆ ಇರುವುದು ಪತ್ತೆಯಾಗಿದೆ.
ಜ್ವರ ಲಕ್ಷಣ ಇಲ್ಲದಿದ್ದರೂ ಎರಡು ದಿನ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ನಿಗಾದಲ್ಲಿಡಲಾಗಿತ್ತು.
ಅವರ ಮನೆಯ ಉಳಿದ ಸದಸ್ಯರಿಗೆ ಯಾವುದೇ ಲಕ್ಷಣಗಳಿಲ್ಲ. ಆ ಊರಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.
 
                         
                         
                         
                         
                         
                         
                         
                         
                         
                        