ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ.
ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.
ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.