ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane

ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ.




ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ 15 ಜನ ಗ್ರಾಪಂ ಸದಸ್ಯರಿದ್ದು ಅದರಲ್ಲಿ 9 ಜನ ಗ್ರಾಪಂ ಸದಸ್ಯರು ಕಾಂಗ್ರೆಸ್ ನವರಾಗಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪಿಡಿಒ ಹೊಡೆದಿದ್ದಾರೆ.




ಕೋಣಂದೂರು ಕಾಂಗ್ರೆಸ್ ಸದಸ್ಯರಿಗೆ ಬಿಜೆಪಿಯ ಪೂರ್ಣೇಶ್ ಅವರು ಹೊಡೆದಿದ್ದಾರೆ. ಇದು 8 ತಿಂಗಳಾಯಿತು. ವಿಶಾಲಾಕ್ಷಿ ಅವರಿಗೆ ಹೊಡೆಯಲಾಗಿದೆ. ಸುರೇಶ್ ಎಂಬುವರಿಗೆ ರಸ್ತೆ ಅಪಘಾತ ವಾದ ಜಾಗದಲ್ಲಿ ಪೂರ್ಣೇಶ್ ಹೊಡೆದಿದ್ದಾರೆ‌. ಈ ವಿಷಯ ಗೃಹಸಚಿವರಿಗೆ ತಿಳಿದಿಲ್ಲವಾ. ಗೃಹಸಚಿವರು ತೀರ್ಥಹಳ್ಳಿಯಲ್ಲಿದ್ದಾರ ಅಥವ ಇಲ್ಲವಾ ಎಂದು ಕಿಮ್ಮನೆ ಕೆಂಡ ಮಂಡಲರಾಗಿದ್ದಾರೆ. ಗೃಹಸಚಿವರು ಮಹಿಳೆಯರ ಮೇಲೆ ಕೈ ಮಾಡಿದ್ದರೂ ಸುಮ್ಮನಿದ್ದರಾ? ಇದು ಇತ್ಯಾರ್ಥ್ಯವಾಗಬೇಕು ಎಂದು ಕಿಮ್ಮನೆ ಬಿಗಿಪಟ್ಟು ಹಿಡಿದಿದ್ದಾರೆ.

ಪಿಡಿಓ ಸಸ್ಪೆಂಡ್ ಆಗುವವರೆಗೂ ನಾನು ಒಂದಿಂಚು ಕದಲಲ್ಲ. ಮೇಲಿನ ಕುರುವಳ್ಳಿಯ ಪಿಡಿಒ ಮತ್ತು ಕೋಣಂದೂರು ಪಿಡಿಒ ವರ್ಗಾವಣೆ ಆದರೂ ತೀರ್ಥಹಳ್ಳಿ ಯಲ್ಲಿ ಉಳಿದುಕೊಂಡಿದ್ದಾರೆ. ಅದಕ್ಕೆ ಗೃಹ ಸಚಿವರ ಬೆನ್ನಲುಬು ಇದೆ ಎಂದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

13 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

16 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

17 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

17 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago