ನಾಗರಹಳ್ಳಿಯಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ|Hospital

ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಹಾಗೂ 06 ಲಕ್ಷ ವೆಚ್ಚದ ವ್ಯಾಯಾಮ ಶಾಲೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.




ನಂತರ ಮಾತನಾಡಿದ ಗ್ರಾಪಂ ಸದಸ್ಯ ರಾಘವೇಂದ್ರ ತೋಟದಕಟ್ಟು ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಅತ್ಯವಶ್ಯ. ಸಣ್ಣ ಪುಟ್ಟ ಖಾಯಿಲೆಗಳಿಗೆ ತಾಲೂಕ್ ಆಸ್ಪತ್ರೆಯನ್ನು ಅವಲಂಭಿಸಬಾರದು ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೆ ನಮ್ಮ ಸರ್ಕಾರ ಶ್ರಮಿಸಬೇಕಾಗಿದೆ ಎಂದರು.

ನಾಗರಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಮತ್ತು ವ್ಯಾಯಾಮ ಶಾಲೆ ಗ್ರಾಮದ ಜನ ಹಲವು ದಿನಗಳ ಕನಸಾಗಿತ್ತು ಈ ಹಿಂದೆ ಅನೇಕ ಬಾರಿ ಅನುದಾನ ಬಂದರೂ ಜಾಗದ ಸಮಸ್ಯೆಯಿಂದ ಲಕ್ಷಾಂತರ ರೂ ಹಣ ವಾಪಾಸು ಹೋಗುತಿತ್ತು ಆದರೆ ಈ ಬಾರಿ ಗ್ರಾಮ ಪಂಚಾಯತ್ , ಆರೋಗ್ಯ ಇಲಾಖೆ ,ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಕಾಮಗಾರಿ ಪ್ರಾರಂಭವಾಗಿರುವುದು ಸಂತಸದ ವಿಚಾರವಾಗಿದೆ ಎಂದರು.




ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಸರೋಜ ನವೀನ್ , ಶ್ರೀಧರ್ ,ಸುಮಂಗಳ ದೇವರಾಜ್ , ಯಶಸ್ಪತಿ ವೃಷಭರಾಜ್ ಜೈನ್ ,ಪಿಡಿಓ ರಮೇಶ್ ,ಸತೀಶ್ ರಾವ್ ,ಕೇಶವ್ ಮೂರ್ತಿ ,ಸುರೇಶ್ ಆರೋಗ್ಯ ಇಲಾಖೆಯ ಪವಿತ್ರಾ ಹಾಗೂ ಇನ್ನಿತರರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…

2 hours ago

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr.…

2 hours ago

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು Shivamogga…

2 hours ago

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…

6 hours ago

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

7 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

7 hours ago