ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಮರಾಠಾ ಸಮಾಜದ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮರಾಠ ಸಂಘ ಹಾಗೂ ಕ್ಷತ್ರಿಯ ಮರಾಠ ಯುವ ವೇದಿಕೆ ವತಿಯಿಂದ ನಾಳೆ 03/03/2023 ರಂದು ಸಂಜೆ 4.30 ಗಂಟೆಗೆ ಅದ್ದೂರಿಯಾಗಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ , ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ,ಮಾಜಿ ಮಂತ್ರಿಗಳಾದ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಬೆಳಿಗ್ಗೆ 11.30 ಗೆ ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು,ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 2 ಗಂಟೆಗೆ ಛತ್ರಪತಿ ಶಿವಾಜಿ ಪ್ರತಿಮೆಯ ಬೃಹತ್ ಮೆರವಣಿಗೆ ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತದ ಮಾರ್ಗವಾಗಿ ಸಾಗರ ರಸ್ತೆಯ ವೇದಿಕೆಯವರೆಗೂ ಸಾಗಲಿದೆ.
ಈ ಕಾರ್ಯಕ್ರಮಕ್ಕೆ ಎಲ್ಲಾ ಸಾರ್ವಜನಿಕರು , ಹಿಂದೂ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸಹಕರಿಸುವಂತೆ ಸಮಿತಿಯವರು ಮನವಿ ಮಾಡಿದ್ದಾರೆ.