ನಾಳೆ (03-03-2023) ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಛತ್ರಪತಿ ಶಿವಾಜಿ ಜಯಂತ್ಯೋತ್ಸವ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಮರಾಠಾ ಸಮಾಜದ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮರಾಠ ಸಂಘ ಹಾಗೂ ಕ್ಷತ್ರಿಯ ಮರಾಠ ಯುವ ವೇದಿಕೆ ವತಿಯಿಂದ ನಾಳೆ 03/03/2023 ರಂದು ಸಂಜೆ 4.30 ಗಂಟೆಗೆ ಅದ್ದೂರಿಯಾಗಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.




ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ , ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ,ಮಾಜಿ ಮಂತ್ರಿಗಳಾದ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.


ಬೆಳಿಗ್ಗೆ 11.30 ಗೆ ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು,ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 2 ಗಂಟೆಗೆ ಛತ್ರಪತಿ ಶಿವಾಜಿ ಪ್ರತಿಮೆಯ ಬೃಹತ್ ಮೆರವಣಿಗೆ ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತದ ಮಾರ್ಗವಾಗಿ ಸಾಗರ ರಸ್ತೆಯ ವೇದಿಕೆಯವರೆಗೂ ಸಾಗಲಿದೆ.




ಈ ಕಾರ್ಯಕ್ರಮಕ್ಕೆ ಎಲ್ಲಾ ಸಾರ್ವಜನಿಕರು , ಹಿಂದೂ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸಹಕರಿಸುವಂತೆ ಸಮಿತಿಯವರು ಮನವಿ‌ ಮಾಡಿದ್ದಾರೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

47 minutes ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 hour ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

5 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

7 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

7 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

17 hours ago