ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ
ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಬಿ.ಸಿ. ನಾಗೇಶ್, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಮಾವೇಶದ ಮೂಲಕ ಡಬಲ್ ಇಂಜಿನ್ ಸರ್ಕಾರ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ನೀಡಿದ ಯೋಜನೆಗಳನ್ನು ಜನರ ಮನಸ್ಸಿಗೆ ತಲುಪಿಸುವ ಕೆಲಸ ಮಾಡಲಾಗುತ್ತದೆ ಎಂದರು.

ಮುಂದಿನ ಚುನಾವಣೆಯಲ್ಲಿ ಸಹ ಸಾಗರ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ವಿಜಯಸಂಕಲ್ಪ ಯಾತ್ರೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದರು.

ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಲೋಕನಾಥ್ ಬಿಳಿಸಿರಿ, ನಗರ ಮಂಡಲ ಅಧ್ಯಕ್ಷ ಕೆ.ಆರ್. ಗಣೇಶಪ್ರಸಾದ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ಮಂಡಲ ಬೂತ್‌ನಲ್ಲಿ ವಿಜಯ ಸಂಕಲ್ಪಯಾತ್ರೆಗೆ ಸಂಬಂಧಪಟ್ಟಂತೆ ಪೂರ್ವಭಾವಿ ಸಭೆ ನಡೆದಿದ್ದು, ಯಾತ್ರೆ ಯಶಸ್ಸಿಗೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

11 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

11 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago