ರಿಪ್ಪನ್ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ.
ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ.
ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು:
* 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ.
* ಮಕ್ಕಳ ಡಾಕ್ಟರ್ ಲಭ್ಯವಿರುತ್ತಾರೆ.
* ಆ ಸ್ತ್ರೀರೋಗ ತಜ್ಞರು.
* ಮೂಳೆ ತಜ್ಞರು.
* ಶ್ವಾಸಕೋಶ ತಜ್ಞರು.
* ಮಕ್ಕಳ ನರರೋಗ ತಜ್ಞರು.
* ಮೆಡಿಕಲ್ ಸೌಲಭ್ಯ.
* ಲ್ಯಾಬ್ ಸೌಲಭ್ಯ.
* ಎಮರ್ಜನ್ಸಿ & ಕನ್ಸಲ್ಟೆಂಗ್,
* ಎಕ್ಸ್ ರೇ.
* 24*7 ಆ್ಯಂಬುಲೆನ್ಸ್.
* ಇ.ಸಿ.ಜಿ
* ಸುಸರ್ಜಿತ ಬೆಡ್ ವ್ಯವಸ್ಥೆ.
* ನೆಬ್ಯುಲೈಜೇಷನ್.
* ಸಕ್ಕರೆ ಕಾಯಿಲೆ ಪರೀಕ್ಷೆ.
* ತೈರಾಯಿಡ್ ಪರೀಕ್ಷೆ.
ಇನ್ನಿತರ ಸೇವೆಗಳು ಲಭ್ಯವಿದೆ ಎಂದು ಆಸ್ಪತ್ರೆಯ ಆಡಳಿತ ವ್ಯವಸ್ಥಾಪಕರಾದ ಸಚಿನ್ ಗೌಡ ಮತ್ತು ವಚನ್ ಗೌಡ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್