ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.




ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತು ಪಡೆಸಿಕೊಳ್ಳಲಾಗಿದೆ ಎಂದು ತಿಳಿಸಿದೆ.
  • 1) ದಿನಾಂಕಃ 22-03-2023 ರಂದು ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 29,70,000/-  ರೂಗಳ ಒಟ್ಟು  1100 ಸಂಖ್ಯೆಯ ನಾನ್ ಸ್ಟಿಕ್ ದೋಸಾ ತವಾ ಗಳನ್ನು ವಶಪಡಿಸಿಕೊಳ್ಳಲಾಗಿದೆ.
  • 2) ದಿನಾಂಕಃ 22-03-2023  ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 8,00,000/-  ರೂಗಳ ಒಟ್ಟು 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳು ತುಂಬಿದ್ದ 1,000/-  ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
  • 3) ದಿನಾಂಕಃ 22-03-2023  ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 7,00,000/-  ರೂ ಗಳ ಒಟ್ಟು 10 ಟನ್ 504 ಕೆಜಿ ತೂಕದ  ಅಕ್ಕಿ ತುಂಬಿದ್ದ  404 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.
  • 4) ದಿನಾಂಕಃ 22-03-2023 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 10,00,000/-  ರೂ ಗಳ  ಬಟ್ಟೆ, ಸೀರೆ, ಇಡ್ಲಿ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.



ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ದಿನಾಂಕ 22-03-2023  ರಂದು  ಅಂದಾಜು ಮೌಲ್ಯ 17,507/- ರೂಗಳ ಒಟ್ಟು 25 ಲೀಟರ್ 608 ಮಿಲಿ ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಒಟ್ಟು 8  ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದ  ಪೊಲೀಸ್ ಇಲಾಖೆ ತಿಳಿಸಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 hour ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

2 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

6 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago